ಡಿ.ಕೆ.ಶಿವಕುಮಾರ್‌ಗೆ ಯಾವ ಖಾತೆ ಖಾತ್ರಿ?

Published : May 23, 2018, 12:29 PM ISTUpdated : May 23, 2018, 12:58 PM IST
ಡಿ.ಕೆ.ಶಿವಕುಮಾರ್‌ಗೆ ಯಾವ ಖಾತೆ ಖಾತ್ರಿ?

ಸಾರಾಂಶ

ರಾಜ್ಯದಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನೊಂದಿಗೆ ಕೈ ಜೋಡಿಸಿರುವ ಜೆಡಿಎಸ್, ಸರಕಾರ ರಚಿಸುತ್ತಿದೆ. ಈ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸಿದವರು ಕಾಂಗ್ರೆಸ್‌ನ ಡಿ.ಕೆ.ಶಿವಕುಮಾರ್. ಆದರೆ, ಸರಕಾರದ ಇವರಿಗೆ ಯಾವ ಖಾತೆ ನೀಡುತ್ತಾರೆಂಬ ಬಗ್ಗೆ ಸ್ಪಷ್ಟ ಮಾಹಿತಿಯಿಲ್ಲ. ಈ ಬಗ್ಗೆ ನೊಂದ ಶಿವಕುಮಾರ್ ಸುವರ್ಣ ನ್ಯೂಸ್‌ಗೆ ಹೇಳಿದ್ದಿಷ್ಟು....

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನೊಂದಿಗೆ ಕೈ ಜೋಡಿಸಿರುವ ಜೆಡಿಎಸ್, ಸರಕಾರ ರಚಿಸುತ್ತಿದೆ. ಈ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸಿದವರು ಕಾಂಗ್ರೆಸ್‌ನ ಡಿ.ಕೆ.ಶಿವಕುಮಾರ್. ಆದರೆ, ಸರಕಾರದ ಇವರಿಗೆ ಯಾವ ಖಾತೆ ನೀಡುತ್ತಾರೆಂಬ ಬಗ್ಗೆ ಸ್ಪಷ್ಟ ಮಾಹಿತಿಯಿಲ್ಲ. ಈ ಬಗ್ಗೆ ನೊಂದ ಶಿವಕುಮಾರ್ ಸುವರ್ಣ ನ್ಯೂಸ್‌ಗೆ ಹೇಳಿದ್ದಿಷ್ಟು..

- ನನಗೆ ಯಾವ ಖಾತೆ ಕೊಡ್ತಾರೆ ಅನ್ನೋದನ್ನ‌ಹೇಗೆ ಹೇಳಲಿ? ಎಲ್ಲವಕ್ಕೂ ಮುಹೂರ್ತ, ಶುಭಕಾಲ, ರಾಹುಕಾಲ, ಗುಳಿಗ ಕಾಲ ಬರಬೇಕು.  ನಾನು ಎಲ್ಲೂ ಸೈಲೆಂಟಾಗಿಲ್ಲ.  ಸನ್ಯಾಸಿಯೂ ಅಲ್ಲ, ಚೆಂಡು ಆಡಲ್ಲ, ನಾನು ಚೆಸ್ ಗೇಮ್ ಆಡುವವನು.

- ಹಣೆ ಬರಹದ ಮುಂದೆ ಯಾರೂ ಏನೂ ಮಾಡಿದರೂ ನಡೆಯೋಲ್ಲ. ಎಲ್ಲವಕ್ಕೂ ಹಣೆಯಲ್ಲಿ ಬರೆದಿರಬೇಕು. ನಾನು ಸರ್ಕಾರದ ಭಾಗವಾಗಿ ಇರ್ತಿನೋ ಇಲ್ವೋ ಗೊತ್ತಿಲ್ಲ. ನನ್ನ ಕೆಲಸ ನಾನು ನಿಷ್ಠೆಯಿಂದ ಮಾಡಿದ್ದೇನೆ. ಸದ್ಯ ನಾನು ಶಾಸಕ. ಶಾಸಕನಾಗಿ ಇರಲು ಹೇಳಿದ್ದಾರೆ. ನಾನು ನನ್ನ ಕ್ಷೇತ್ರಕ್ಕೆ ತೆರಳಿ ಜನರನ್ನ ಮಾತಾಡಿಸಬೇಕಿದೆ. ಶಾಸಕರನ್ನ ಒಟ್ಟಿಗೆ ಹಿಡಿದಿಟ್ಟುಕೊಳ್ಳುವ ಕೆಲಸವಿದೆ. 

- ರೈತರ ಸಾಲ‌ಮನ್ನಾ ವಿಚಾರವಾಗಿ ಕುಮಾರಸ್ವಾಮಿ ‌ಈಗಾಗಲೇ ‌ಹೇಳಿದ್ದಾರೆ. ಸದ್ಯದ ಆರ್ಥಿಕ ಪರಿಸ್ಥಿತಿಯನ್ನ‌ ನೋಡಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ.

- ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ, ಎನ್ನುವ ಮೂಲಕ  ಡಿಸಿಎಂ ಹುದ್ದೆ ತಪ್ಪಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದುವೆ ವಯಸ್ಸಾಗದಿದ್ರೂ ವಯಸ್ಕರು ಲಿವ್‌ ಇನ್‌ನಲ್ಲಿ ಇರಬಹುದು: ಕೋರ್ಟ್‌
ಅಸ್ವಸ್ಥ ಖಲೀದಾ ಜಿಯಾ ಹೆಚ್ಚಿನ ಚಿಕಿತ್ಸೆಗೆ ನಾಳೆ ಲಂಡನ್‌ಗೆ