ಮಹದೇವಪ್ರಸಾದ್ ನಿಧನದಿಂದ ತೆರವಾದ ಸಚಿವ ಸ್ಥಾನಕ್ಕೆ ಲಾಬಿ

Published : Jan 10, 2017, 05:26 PM ISTUpdated : Apr 11, 2018, 12:51 PM IST
ಮಹದೇವಪ್ರಸಾದ್ ನಿಧನದಿಂದ ತೆರವಾದ ಸಚಿವ ಸ್ಥಾನಕ್ಕೆ ಲಾಬಿ

ಸಾರಾಂಶ

ಚಾಮರಾಜನಗರ ಜಿಲ್ಲೆಯ ಉಪ್ಪಾರ ಸಮುದಾಯಕ್ಕೆ ಸೇರಿದ ಬೆಂಬಲಿಗರು ಮಂಗಳವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಗೃಹಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ್ದರು.

ಬೆಂಗಳೂರು(ಜ.10): ಸಹಕಾರ ಮತ್ತು ಸಕ್ಕರೆ ಸಚಿವ ಹೆಚ್.ಎಸ್. ಮಹದೇವಪ್ರಸಾದ್ ನಿಧನದಿಂದ ತೆರವಾದ ಸ್ಥಾನಕ್ಕೆ ಚಾಮರಾಜನಗರದ ಶಾಸಕರನ್ನೇ ಸಚಿವರನ್ನಾಗಿ ಮಾಡುವಂತೆ ಲಾಬಿ ಶುರುವಾಗಿದೆ. ಚಾಮರಾಜನಗರದಿಂದ ಬಂದಿದ್ದ ಶಾಸಕ ಪುಟ್ಟರಂಗಶೆಟ್ಟಿ ಬೆಂಬಲಿಗರು ತೆರವಾದ ಸ್ಥಾನವನ್ನು ಚಾಮರಾಜನಗರದವರಿಗೆ ನೀಡುವಂತೆ ಆಗ್ರಹಿಸಿದರು.

ಚಾಮರಾಜನಗರ ಜಿಲ್ಲೆಯ ಉಪ್ಪಾರ ಸಮುದಾಯಕ್ಕೆ ಸೇರಿದ ಬೆಂಬಲಿಗರು ಮಂಗಳವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಗೃಹಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ್ದರು. 300ಕ್ಕೂ ಹೆಚ್ಚು ಬೆಂಬಲಿಗರು ಪುಟ್ಟರಂಶೆಟ್ಟಿಯವರನ್ನು ಸಚಿವರನ್ನಾಗಿ ಮಾಡಬೇಕೆಂದು ಘೋಷಣೆ ಕೂಗಿದರು. ಚಾಮರಾಜನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಯ್ಯದ್‌ ರಫಿ ನೇತೃತ್ವದಲ್ಲಿ ಸಿಎಂ ಭೇಟಿ ಮಾಡಿದ್ದು ಮೊದಲು ಅಲ್ಲಿನ ಉಪಚುನಾವಣೆ ಗೆಲ್ಲುವುದನ್ನು ಖಾತರಿಪಡಿಸಿಕೊಳ್ಳಿ ಬಳಿಕವಷ್ಟೇ ಸಚಿವ ಸ್ಥಾನದ ಕುರಿತು ಮಾತನಾಡೋಣ.ಉಪಚುನಾವಣೆ ಮುಂದಿಟ್ಟುಕೊಂಡು ಈ ರೀತಿ ಒತ್ತಡ ತಂದರೆ ಹೇಗೆ. ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಲು ಶ್ರಮಿಸಿ ಎಂದು ಸಿಎಂ ಹೇಳಿರುವುದಾಗಿ ತಿಳಿದುಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚುನಾವಣೆ ಆಯೋಗದ 6 ಲೋಪ ಬಳಸಿ ಆಳಂದ ಕ್ಷೇತ್ರದಲ್ಲಿ ಮತಗಳ್ಳತನ: ಎಸ್‌ಐಟಿ
ಮೋದಿ, ಶಾಗೇ ಹೆದರದೆ ಜೈಲಿಗೆ ಹೋಗಿದ್ದೆ, ಯಾರಿಗೂ ಜಗ್ಗಲ್ಲ: ಡಿ.ಕೆ.ಶಿವಕುಮಾರ್‌ ಎಚ್ಚರಿಕೆ