
ರಾಮನಗರ : ರಾಜ್ಯಕ್ಕೆ ಮೂವರು ಮುಖ್ಯಮಂತ್ರಿಗಳನ್ನು ಕೊಡುಗೆ ನೀಡಿದ ಕ್ಷೇತ್ರ. ಹಾಲಿ ಶಾಸಕರಾಗಿರುವ ಎಚ್.ಡಿ. ಕುಮಾರಸ್ವಾಮಿ ಸತತ ಮೂರು ಬಾರಿ ಇಲ್ಲಿಂದ ಗೆದ್ದಿದ್ದಾರೆ. ಕಳೆದ ಬಾರಿ ಕಾಂಗ್ರೆಸ್ ಅಭ್ಯರ್ಥಿ ಮರಿದೇವರು ಅವರು ‘ದಳಪತಿ’ಯ ಗೆಲುವಿನ ನಾಗಾಲೋಟಕ್ಕೆ ಕಡಿವಾಣ ಹಾಕಲು ಯತ್ನಿಸಿದ್ದರು.
ಆದರೆ 30 ಸಾವಿರ ಮತಗಳ ಅಂತರದಿಂದ ಕುಮಾರಸ್ವಾಮಿ ಗೆಲುವು ಸಾಧಿಸಿದ್ದರು. ಮರಿದೇವರು ಇಹಲೋಕ ತ್ಯಜಿಸಿದ್ದಾರೆ. ಕುಮಾರಸ್ವಾಮಿ ಅವರಿಗೆ ಸವಾಲು ಒಡ್ಡುವಂತಹ ಸಮರ್ಥ ಅಭ್ಯರ್ಥಿಗೆ ಕಾಂಗ್ರೆಸ್ ಹುಡುಕಾಟ ನಡೆಸಿದೆ.
ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಇಕ್ಬಾಲ್ ಹುಸೇನ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಲ್. ಚಂದ್ರಶೇಖರ್ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಸಂಸದ ಡಿ.ಕೆ. ಸುರೇಶ್ ಹೆಸರೂ ಓಡಾಡುತ್ತಿದೆ. ಬಿಜೆಪಿಯಿಂದ ಜಗದೀಶ್ ಗೌಡ ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ. ಆ ಪಕ್ಷದ ನಾಯಕರು ಮರಿದೇವರು ಪತ್ನಿಯನ್ನು ಪಕ್ಷಕ್ಕೆ ಸೆಳೆದು ಕಣಕ್ಕಿಳಿಸುವ ಪ್ರಯತ್ನದಲ್ಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.