
ವಾಷಿಂಗ್ಟನ್[ಆ.4]: ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆ ಸ್ವಚ್ಛ ಭಾರತ ಅಭಿಯಾನಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಮೆಚ್ಚುಗೆ ವ್ಯಕ್ತಪಡಿಸಿದೆ. ಸ್ವಚ್ಛ ಭಾರತ ಯೋಜನೆಯಿಂದ ವರ್ಷಕ್ಕೆ ಮೂರು ಲಕ್ಷ ಅಮೂಲ್ಯ ಜೀವಗಳನ್ನು ಉಳಿಸಲು ಸಾಧ್ಯ ಎಂದು ಡಬ್ಲ್ಯೂಹೆಚ್ ಓ ಹೇಳಿದೆ. ಆರೋಗ್ಯಕರ ಭಾರತದೆಡೆಗೆ ಸಾಗುವ ಈ ಯೋಜನೆಯನ್ನು ಬಹುವಾಗಿ ಮೆಚ್ಚಿಕೊಂಡಿದೆ.
ಪ್ರಧಾನಿ ನರೇಂದ್ರ ಮೋದಿ 2014ರ ಅಕ್ಟೋಬರ್ 2ರಂದು ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡಿದ್ದರು. 2019ರೊಳಗೆ ದೇಶವನ್ನು ಬಯಲು ಶೌಚ ಮುಕ್ತವಾಗಿರಿಸುವ ಗುರಿಯನ್ನು ಈ ಮಹತ್ವಾಕಾಂಕ್ಷಿ ಯೋಜನೆಯು ಹೊಂದಿದೆ.
2019ರ ಗುರಿಯ ಪ್ರಕಾರ ಭಾರತವು ಬಯಲು ಶೌಚ ಮುಕ್ತವಾದರೆ ಜನರು ಡಯೋರಿಯಾ ಮುಂತಾದ ಕಾಯಿಲೆಗಳಿಗೆ ಗುರಿಯಾಗುವುದನ್ನು ತಪ್ಪಿಸಬಹುದಾಗಿದೆ. ಮಾತ್ರವಲ್ಲದೆ ವರ್ಷಕ್ಕೆ ಮೂರು ಲಕ್ಷ ಜನರು ಸಾಯುವುದನ್ನು ತಪ್ಪಿಸಬಹುದಾಗಿದೆ.
ಜೊತೆಗೆ 1.40 ಕೋಟಿ ಜನರು ಆರೋಗ್ಯಕರ ಜೀವನ ನಡೆಸುವುದು ಸಾಧ್ಯವಾಗುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತನ್ನ ವರದಿಯಲ್ಲಿ ಹೇಳಿದೆ. ಸ್ವಚ್ಛ ಭಾರತ ಗ್ರಾಮೀಣ ಅಭಿಯಾನದಿಂದ ಹಳ್ಳಿಗರ ಆರೋಗ್ಯ ಸುಧಾರಿಸುವುದಲ್ಲದೆ ಅವರು ದೀರ್ಘಾಯುಗಳಾಗಲು ಸಾಧ್ಯ ಎಂದೂ ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.