ವಿಧಿಬರಹ ಹೇಗಿದೆಯೋ ಹಾಗೆ ನಡೆಯುತ್ತದೆ: ಸಚಿವ ಎಚ್.ಸಿ.ಮಹಾದೇವಪ್ಪ

Published : Aug 28, 2017, 01:14 PM ISTUpdated : Apr 11, 2018, 12:35 PM IST
ವಿಧಿಬರಹ ಹೇಗಿದೆಯೋ ಹಾಗೆ ನಡೆಯುತ್ತದೆ: ಸಚಿವ ಎಚ್.ಸಿ.ಮಹಾದೇವಪ್ಪ

ಸಾರಾಂಶ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಲ್ಲಿ ಡಾ.ಯತೀಂದ್ರ,  ಟಿ.ನರಸೀಪುರದಲ್ಲಿ ಸುನೀಲ್ ಬೋಸ್ ಗೆ ಕ್ಷೇತ್ರ ಬಿಟ್ಟುಕೊಡುವ ವಿಚಾರವಾಗಿ ಮಾತನಾಡಿದ ಲೋಕೋಪಯೋಗಿ ಸಚಿವ ಎಚ್.ಸಿ.ಮಹಾದೇವಪ್ಪ, ವಿಧಿಬರಹ ಹೇಗಿದೆಯೋ ಹಾಗೆ ನಡೆಯುತ್ತದೆ ಎಂದು ಹೇಳಿದ್ದಾರೆ.

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಲ್ಲಿ ಡಾ.ಯತೀಂದ್ರ,  ಟಿ.ನರಸೀಪುರದಲ್ಲಿ ಸುನೀಲ್ ಬೋಸ್ ಗೆ ಕ್ಷೇತ್ರ ಬಿಟ್ಟುಕೊಡುವ ವಿಚಾರವಾಗಿ ಮಾತನಾಡಿದ ಲೋಕೋಪಯೋಗಿ ಸಚಿವ ಎಚ್.ಸಿ.ಮಹಾದೇವಪ್ಪ, ವಿಧಿಬರಹ ಹೇಗಿದೆಯೋ ಹಾಗೆ ನಡೆಯುತ್ತದೆ ಎಂದು ಹೇಳಿದ್ದಾರೆ.

ವಿಧಾನಸೌಧದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಮಹಾದೇವಪ್ಪ,  ಕ್ಷೇತ್ರ ಬಿಟ್ಟುಕೊಡೋದಿಕ್ಕೆ ನಾವ್ಯಾರು? ಯಾರು ಪಕ್ಷದಲ್ಲಿ ನಾಯಕತ್ವ ರೂಢಿಸಿಕೊಳ್ತಾರೋ, ಪಕ್ಷ ಅವರನ್ನು ಗುರುತಿಸುತ್ತದೆ. ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ.

ಕಳೆದ ಎಂಟ್ಹತ್ತು ವರ್ಷಗಳಿಂದ ಸುನೀಲ್ ಬೋಸ್ ಕಾರ್ಯಕರ್ತರ ಜೊತೆ ಪಕ್ಷದ ಕೆಲಸ ಮಾಡ್ತಿದ್ದಾರೆ, ಅದೇ ಥರ ಡಾ.ಯತೀಂದ್ರ ಕೂಡಾ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯಕರ್ತರ ಜೊತೆ ಕೆಲಸ ಮಾಡ್ತಿದ್ದಾರೆ, ಇವರಿಬ್ಬರ ಕಾರ್ಯವೈಖರಿ, ಜನಕಾಳಜಿ, ಪಕ್ಷದ ಮೇಲಿನ ಬದ್ಧತೆ ನೋಡಿ ಪಕ್ಷ ತೀರ್ಮಾನ ಕೈಗೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ.

ಮುಂದಿನ ಚುನಾವಣೆಗೆ ತಮ್ಮ ಕ್ಷೇತ್ರ ಯಾವುದು ಅಂತ ಹೇಳದ ಮಹಾದೇವಪ್ಪ,  ಇಡೀ ಕರ್ನಾಟಕವೇ ನನ್ನ ಕ್ಷೇತ್ರ, ವಿಧಿಬರಹ ಹೇಗಿದೆಯೋ ಹಾಗೆ ನಡೆಯುತ್ತದೆ ಎಂದು ಹೇಳಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Vastu Shastra: ನೆನಪಿಡಿ, ಅದೃಷ್ಟ ಕೈಹಿಡಿಯಲು ದೇವಸ್ಥಾನಕ್ಕೆ ಈ ಮೂರು ವಸ್ತುಗಳನ್ನ ಗುಟ್ಟಾಗಿ ದಾನ ಮಾಡ್ಬೇಕು!
ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ