
ಹುಬ್ಬಳ್ಳಿ : ರಾಜ್ಯದಲ್ಲಿ ಲೋಕಸಭಾ ಚುನಾವಣೆ ಕಾವು ಆರಿದೆ. ಅಭ್ಯರ್ಥಿಗಳು ಫಲಿತಾಂಶಕ್ಕೆ ಕಾತರರಾಗಿದ್ದಾರೆ. ಇದೇ ವೇಳೆ ರಾಜ್ಯದಲ್ಲಿ ಇದೀಗ ವಿಧಾನ ಸಭಾ ಉಪ ಚುನಾವಣೆ ಮಾಡುತ್ತಿದೆ.
ಸಚಿವ ಶಿವಳ್ಳಿ ನಿಧನದಿಂದ ತೆರವಾದ ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯುತ್ತಿದ್ದು, ಈ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.
ಈಗಾಗಲೇ ಶಿವಳ್ಳಿ ಪತ್ನಿಗೆ ಟಿಕೆಟ್ ನೀಡಲು ಕಾಂಗ್ರೆಸ್ ಮುಖಂಡರಲ್ಲಿ ಒಮ್ಮತವಿದೆ. ಆದರೆ ಇಲ್ಲಿನ ಸ್ಥಳೀಯ ಕಾಂಗ್ರೆಸ್ ಮುಖಂಡ ಕಣಕ್ಕಿಳಿಯಲು ಇಚ್ಚಿಸಿದ್ದು, ಈ ನಿಟ್ಟಿನಲ್ಲಿ ಪಕ್ಷದ ವರಿಷ್ಠರ ಬಳಿ ಟಿಕೆಟ್ ನೀಡುವಂತೆ ಮನವಿ ಸಲ್ಲಿಸಿದ್ದಾರೆ.
ಯಲ್ಲಪ್ಪ ಬಿಸಿರೊಟ್ಟಿ ಕುಂದಗೋಳ ತಾಲೂಕಿನ ಹಿರೇಗುಂಜಳದ ಕಾಂಗ್ರೆಸ್ ಮುಖಂಡರಾಗಿದ್ದು, ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಈ ವಿಚಾರ ತಿಳಿಸಿದ್ದಾರೆ.
ಒಂದು ವೇಳೆ ಟಿಕೆಟ್ ಸಿಗದಿದ್ದಲ್ಲಿ ಪಕ್ಷ ಸೂಚಿಸಿದ ಅಭ್ಯರ್ಥಿಗೆ ಬೆಂಬಲ ನೀಡಿ, ಸಿದ್ಧಾಂತಗಳಿಗೆ ಬದ್ಧನಾಗಿ ನಡೆದುಕೊಳ್ಳುವುದಾಗಿ ಹೇಳಿದ ಯಲ್ಲಪ್ಪ ಬಿಸಿರೊಟ್ಟಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.