
ನವದೆಹಲಿ: ಪೈಲಟ್ ಅಭಿನಂದನ್ ಅವರನ್ನು ಮಾರ್ಚ್ 1 ರಂದು ಹಸ್ತಾಂತರಿಸುವುದಾಗಿ ಹೇಳಿದ್ದ ಪಾಕಿಸ್ತಾನ ಇಡೀ ದಿನ ಕಾಯುವಂತೆ ಮಾಡಿತ್ತು. ಅಭಿನಂದನ್ ಅವರನ್ನು ಪಾಕಿಸ್ತಾನ ಸಂಜೆ 5 ಗಂಟೆಗೆ ಹಸ್ತಾಂತರಿಸುವ ನಿರೀಕ್ಷೆ ಇತ್ತು. ಆ ಸಮಯದಲ್ಲಿ ಬೀಟಿಂಗ್ ರೀಟ್ರೀಟ್ ಕಾರ್ಯಕ್ರಮ ಇರುವ ಕಾರಣ ಹೆಚ್ಚಿನ ಮಾಧ್ಯಮ ಪ್ರಚಾರವನ್ನು ಪಾಕಿಸ್ತಾನ ಬಯಸಿತ್ತು.
ಆದರೆ ಭಾರತ ಬೀಟಿಂಗ್ ರೀಟ್ರೀಟ್ ಕಾರ್ಯಕ್ರಮ ವನ್ನು ರದ್ದುಗೊಳಿಸಿದ್ದರಿಂದ ಉದ್ದೇಶ ಪೂರ್ವಕವಾಗಿ ವಿಳಂಬವಾಗಿ ಅಭಿನಂದನ್ ಅವರನ್ನು ಹಸ್ತಾಂತರಿಸಲು ನಿರ್ಧರಿಸಿತ್ತು.
ಇನ್ನೇನು ಹಸ್ತಾಂತರಿಸಬೇಕು ಎನ್ನುವಷ್ಟರಲ್ಲಿ ಅಭಿನಂದನ್ ಪಾಕಿಸ್ತಾನದಲ್ಲಿ ಕಳೆದ ಎರಡು ದಿನಗಳ ಅನುಭವವನ್ನು ಹೇಳಿಕೊಂಡ ವಿಡಿಯೋವೊಂದನ್ನು ಬಿಡುಗಡೆ ಮಾಡಿತು. ಅಲ್ಲದೇ ಅಭಿನಂದನ್ ಹಸ್ತಾಂತರಕ್ಕೂ ಮುನ್ನ ವೈದ್ಯಕೀಯ ಪರೀಕ್ಷೆ, ವಿವಿಧ ಆರೋಗ್ಯ ಪರೀಕ್ಷೆಗಳಿಗೆ ಒಳಪಡಿಸಲಾಯಿತು. ಜೊತೆಗೆ ಹಸ್ತಾಂತರಕ್ಕೂ ಮುನ್ನ ಇದ್ದ ಆರೋಗ್ಯ ಸ್ಥಿತಿಯನ್ನು ದಾಖಲಿಸಿಕೊಳ್ಳಲಾಗಿದೆ. ಹೀಗಾಗಿ ಅಭಿನಂದನ್ ಪ್ರಕ್ರಿಯೆ ಮೂರ್ನಾಲ್ಕು ಗಂಟೆಗಳ ಕಾಲ ವಿಳಂಬಗೊಂಡಿದೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.