ಸುವರ್ಣ ನ್ಯೂಸ್ ಕಂಬಳ ಅಭಿಯಾನಕ್ಕೆ ಭಾರೀ ಬೆಂಬಲ

Published : Jan 23, 2017, 03:53 PM ISTUpdated : Apr 11, 2018, 12:59 PM IST
ಸುವರ್ಣ ನ್ಯೂಸ್ ಕಂಬಳ ಅಭಿಯಾನಕ್ಕೆ ಭಾರೀ ಬೆಂಬಲ

ಸಾರಾಂಶ

ರಾಜ್ಯಾದ್ಯಂತ ಕಂಬಳ ಪರ ಹೋರಾಟ ಶುರುವಾಗಿದೆ. ನಿನ್ನೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನೂರಾರು ಹೋರಾಟಗಾರರು ಪ್ರತಿಭಟನೆ ಮಾಡಿದ್ದರು. ಇಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಸಮ್ಮುಖದಲ್ಲಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿ ಪ್ರತಿಭಟನೆ ನಡೆಯಿತು.

ಬೆಂಗಳೂರು (ಜ.23): ಕಂಬಳ ಕಾಪಾಡಿ ಸುವರ್ಣ ನ್ಯೂಸ್ ಅಭಿಯಾನಕ್ಕೆ ಭಾರೀ ಬೆಂಬಲ ವ್ಯಕ್ತವಾಗಿದೆ.

ರಾಜ್ಯಾದ್ಯಂತ ಕಂಬಳ ಪರ ಹೋರಾಟ ಶುರುವಾಗಿದೆ. ನಿನ್ನೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನೂರಾರು ಹೋರಾಟಗಾರರು ಪ್ರತಿಭಟನೆ ಮಾಡಿದ್ದರು. ಇಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಸಮ್ಮುಖದಲ್ಲಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿ ಪ್ರತಿಭಟನೆ ನಡೆಯಿತು.

ತಮಿಳುನಾಡಲ್ಲಿ ಜಲ್ಲಿಕಟ್ಟು ಆಚರಣೆಗೆ ಅನುಮತಿ ಸಿಕ್ಕಂತೆ ರಾಜ್ಯದಲ್ಲೂ ಕಂಬಳ ಕ್ರೀಡೆಗೆ ಗ್ರೀನ್ ಸಿಗ್ನಲ್ ಕೊಡಬೇಕು ಎಂದು ವಾಟಾಳ್ ಒತ್ತಾಯಿಸಿದ್ದಾರೆ.

ಕನ್ನಡ ಪರ ಒಕ್ಕೂಟ ಹಾಗೂ  ಅಂಬೇಡ್ಕರ್ ಸೇನೆಯ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಕರ್ನಾಟಕವನ್ನು ನಿರ್ಲಕ್ಷ ಮಾಡುತ್ತಿದೆ ಎಂದು ಪ್ರತಿಕೃತಿ ದಹಿಸಿದ್ದಾರೆ.

ಇದೇ 25 ರ ಒಳಗೆ ಕಂಬಳಕ್ಕೆ ಅನುಮತಿ ನೀಡದಿದ್ದರೆ ರಾಜಭವನಕ್ಕೆ ಮುತ್ತಿಗೆ ಹಾಕಲಾಗುವುದು. ಜೊತೆಗೆ ಕರ್ನಾಟಕ ಬಂದ್​ಗೆ ಕರೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಫಿಲ್ಮ್ ಚೇಂಬರ್ ಅಧ್ಯಕ್ಷ ಸಾ.ರಾ ಗೋವಿಂದು ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎರಡನೇ ವಿಶ್ವ ಆಯುರ್ವೇದ ಸಮ್ಮೇಳನ ಹಲವು ದಾಖಲೆಗಳಿಗೆ ಸಾಕ್ಷಿ: ಡಾ.ಗಿರಿಧರ ಕಜೆ
ದಾವಣಗೆರೆಯ ಶೈಕ್ಷಣಿಕ ಪುನರುಜ್ಜೀವನದ ಶಿಲ್ಪಿ ಶಾಮನೂರು