
ಬಿಎಂಟಿಸಿ ಬಸ್ಸಿನಲ್ಲಿ ಹೋಗುತ್ತಿದ್ದ ಪತಿಯನ್ನು ಕಾರಿನಲ್ಲಿ ಬೆನ್ನುಹತ್ತಿದ ಪತ್ನಿ ಪ್ರಯಾಣಿಕರ ಎದುರೇ ಗುಂಡಿಕ್ಕಿರುವ ಘಟನೆ ಹೊಸೂರು ಮುಖ್ಯರಸ್ತೆಯಲ್ಲಿರುವ ಹುಸ್ಕೂರು ಗೇಟ್ ಬಳಿ ಶುಕ್ರವಾರ ಸಂಜೆ ನಡೆದಿದೆ. ಕುಡಿದ ಅಮಲಿನಲ್ಲಿ ಆರಂಭವಾದ ಜಗಳ ವಿಕೋಪಕ್ಕೆ ಹೋಗಿ ಶೂಟೌಟ್‌ನಲ್ಲಿ ಅಂತ್ಯವಾಗಿದೆ.
ಪತ್ನಿ ಹಾರಿಸಿದ ಗುಂಡೇಟಿನಿಂದ ಗಾಯಗೊಂಡಿರುವ ಎಚ್‌ಎಸ್‌ಆರ್ ಲೇಔಟ್‌ನ ಹರಳೂರಿನ ಸಾಯಿರಾಮ್ (44) ಅವರನ್ನು ಆನೇಕಲ್‌ನ ಸ್ಪಶ್‌ರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಯಿರಾಮ್ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಕರಣ ಸಂಬಂಧ ಆರೋಪಿ ಪತ್ನಿ ಹಂಸವೇಣಿ (38)ಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂರ್ಯ ಸಿಟಿ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.ದಂಪತಿ ಎಚ್‌ಎಸ್‌ಆರ್ ಲೇಔಟ್‌ನ ಹರಳೂರಿನಲ್ಲಿರುವ ‘ರಾಯಲ್ ಪ್ಯಾರಡೈಸ್' ಅಪಾರ್ಟ್‌ಮೆಂಟ್ ನಿವಾಸಿಗಳಾಗಿದ್ದು, ‘ಏಸ್ ಫೆಸಲಿಟಿಸ್ ಮ್ಯಾನೇಜ್‌ಮೆಂಟ್ ಆ್ಯಂಡ್ ಪ್ರಾಪರ್ಟಿಸ್' ಎಂಬ ಕಂಪನಿಯಲ್ಲಿದ್ದಾರೆ.
ಶುಕ್ರವಾರ ಮಧ್ಯಾಹ್ನ ಇಬ್ಬರೂ ಚಂದಾಪುರ ಬಳಿಯ ಯಡವನಹಳ್ಳಿ ಸಮೀಪವಿರುವ ‘ಮ್ಯಾಕ್ಸ್' ಹೋಟೆಲ್‌ಗೆ ಊಟಕ್ಕೆ ತೆರಳಿ ಮದ್ಯ ಸೇವಿಸಿದ್ದಾರೆ.
ಈ ಸಂದರ್ಭದಲ್ಲಿ ಇಬ್ಬರ ನಡುವೆ ಹೋಟೆಲ್‌ನಲ್ಲಿಯೇ ಕ್ಷುಲ್ಲಕ ಕಾರಣಕ್ಕೆ ಜಗಳ ಶುರುವಾದಾಗ ಹೋಟೆಲ್‌ನ ಸಿಬ್ಬಂದಿ ಇಬ್ಬರ ಜಗಳ ಬಿಡಿಸಿ ಕಳುಹಿಸಿದ್ದರು. ಊಟ ಮಾಡಿದ ನಂತರ ದಂಪತಿ ಫಾರ್ಚೂನರ್ ಕಾರಿನಲ್ಲಿ ಮನೆಗೆ ಹೊರಟಿದ್ದರು. ಮಾರ್ಗ ಮಧ್ಯೆ ಕೂಡ ಇಬ್ಬರ ನಡುವೆ ಜಗಳ ಮುಂದುವರಿದಿದೆ.
ಚಂದಾಪುರ ಬಸ್ ಸ್ಟ್ಯಾಂಡ್ ಬಳಿ ಬರುತ್ತಿದ್ದಂತೆ ಗಂಡ ಸಾಯಿರಾಮ್, ಕಾರಿನಿಂದ ಇಳಿದು ಬಿಎಂಟಿಸಿ ಬಸ್ ಹತ್ತಿ ಮನೆಯತ್ತ ಹೊರಟಿದ್ದಾನೆ. ಆದ್ರೆ, ಹಂಸವೇಣಿ ಕಾರಿನಲ್ಲಿ ಬಂದು ಬಸ್ ಅಡ್ಡಗಟ್ಟಿ ಗಂಡನ ಕೆಳಗಿಳಿಸಿ ಏಕಾಏಕಿ ರಿವಾಲ್ವಾರ್ ನಿಂದ ಪತಿ ಮೇಲೆ ಮೂರು ಸುತ್ತ ಗುಂಡು ಹಾರಿಸಿದ್ದಾಳೆ.
ಹೊಟ್ಟೆಯ ಭಾಗಕ್ಕೆ ಗುಂಡು ತಗುಲಿದ್ದರಿಂದ ತೀವ್ರ ಅಸ್ವಸ್ಥಗೊಂಡಿರುವ ಸಾಯಿರಾಮ್ ನನ್ನ ಸ್ಥಳೀಯ ಝಾಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.. ಆದ್ರೆ ಸಾಯಿ ರಾಮ್ ಸ್ಥಿತಿ ಚಿಂತಾಜನಕವಾಗಿದೆ.. ದೇಹಕ್ಕೆ ಸೇರಿರುವ ಬುಲೇಟ್ ಗಳನ್ನು ತೆಗೆಯಲು ವೈದ್ಯರು ಹರಸಾಹಸಪಡ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.