
ಬೆಳಗಾವಿ: ಜಾರಕಿಹೊಳಿ ಬ್ರದರ್ಸ್ ಪಾಲಿಟಿಕ್ಸ್ ರಾಜ್ಯ ರಾಜಕಾರಣದಲ್ಲಿ ಸಂಚಲನ ಉಂಟು ಮಾಡುತ್ತಿದೆ. ಸಹೋದರ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗುವವರೆಗೂ ತಾವು ವಿಶ್ರಮಿಸುವುದಿಲ್ಲ ಎಂದು ಹೇಳಿದ ರಮೇಶ್ ಜಾರಕಿಹೊಳಿ ಮಾತಿಗೆ ಇದೀಗ ಸ್ವತಃ ಸತೀಶ್ ಜಾರಕಿಹೊಳಿ ಸ್ಪಷ್ಟನೆಯೊಂದನ್ನು ನೀಡಿದ್ದಾರೆ.
ತಾವು ಸಿಎಂ ಆಗಬೇಕೆಂದು ಸಹೋದರ ರಮೇಶ್ ಜಾರಕಿಹೊಳಿ ಹೇಳಿರುವುದು ಈಗಿನ ವಿಚಾರವಲ್ಲ. ಆದರೆ ಅದು ಮುಂದಿನ ವಿಚಾರವಾಗಿದೆ ಎಂದು ಹೇಳಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಆಗಲು ಇನ್ನು ಕಾಲಾವಕಾಶವಿದೆ. ರಮೇಶ್ ಹೇಳಿರುವ ಮಾತು ಮುಂದಿನ ಹತ್ತು ವರ್ಷಗಳಲ್ಲಿ ಆಗಬಹುದಾಗಿರುವ ಬೆಳವಣಿಗೆ. ಅದನ್ನು ಚರ್ಚೆ ಮಾಡುತ್ತೇವೆ. ಎಷ್ಟು ಜನ ಬೆಂಬಲ ಸೂಚಿಸುತ್ತಾರೋ ಕಾದು ನೋಡಬೇಕು ಎಂದರು.
ಇನ್ನು ಇದೇ ವೇಳೆ ಲೋಕಸಭಾ ಚುನಾವಣೆಯ ಬಗ್ಗೆಯೂ ಕೂಡ ಪ್ರತಿಕ್ರಿಯಿಸಿ ಈ ಚುನಾವಣೆಯಲ್ಲಿ ನಿಲ್ಲುವ ಮನಸ್ಸು ತಮಗೆ ಇಲ್ಲ. ಆದರೆ ಹೈಕಮಾಂಡ್ ನಿರ್ಣಯ ತೆಗೆದುಕೊಂಡರೆ ನೋಡೋಣ ಎಂದಿದ್ದಾರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.