
ಬಾಗಲಕೋಟೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶಿಕಾರಿಪುರ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ. ಬಾಗಲಕೋಟೆ ಜಿಲ್ಲೆಯ ತೇರದಾಳ ಕ್ಷೇತ್ರದಿಂದ ಪಕ್ಷದ ಜಿಲ್ಲಾಧ್ಯಕ್ಷ ಸಿದ್ದು ಸವದಿ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. ಈ ಮೂಲಕ ಉತ್ತರ ಕರ್ನಾಟಕದಿಂದ ಸ್ಪರ್ಧಿಸುವ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿಯಲ್ಲಿ ಬಿಜೆಪಿ ಆಯೋಜಿಸಿದ್ದ ನೇಕಾರರ ಸಮಾವೇಶ ಸಮಾವೇಶ ಉದ್ಘಾಟಿಸಿ ಮಾತನಾಡಿ, ತೇರದಾಳ ಕ್ಷೇತ್ರದಿಂದ ಸ್ಪರ್ಧಿಸಬೇಕೆಂದು ಈ ಹಿಂದೆ ನಿರ್ಧರಿಸಿದ್ದೆ. ಆದರೆ ಶಿಕಾರಿಪುರ ಕ್ಷೇತ್ರದ ಜನತೆ, ಕಾರ್ಯಕರ್ತರು ನನ್ನನ್ನು ಬಿಟ್ಟುಕೊಡಲು ಸಿದ್ಧರಿಲ್ಲ. ಅಲ್ಲಿಂದಲೇ ಸ್ಪರ್ಧಿಸಬೇಕು ಎಂದು ಒತ್ತಡ ಹೇರುತ್ತಿದ್ದಾರೆ. ನಾಮಪತ್ರ ಸಲ್ಲಿಸಿ ನೀವು ರಾಜ್ಯಾದ್ಯಂತ ಪ್ರವಾಸ ಮಾಡಿ, ನಾವೇ ಮುಂದೆ ನಿಂತು ಗೆಲ್ಲಿಸುತ್ತೇವೆ ಎಂದು ಅಲ್ಲಿನ ಕಾರ್ಯಕರ್ತರು ಹೇಳುತ್ತಿದ್ದಾರೆ. ಹೀಗಾಗಿ ಅಲ್ಲಿಂದಲೇ ಸ್ಪರ್ಧಿಸಲಿದ್ದೇನೆ. ತೇರದಾಳದಿಂದ ಪಕ್ಷದ ಜಿಲ್ಲಾಧ್ಯಕ್ಷರಾಗಿರುವ ಸಿದ್ದು ಸವದಿ ಸ್ಪರ್ಧಿಸಲಿದ್ದಾರೆ. ಈ ವಿಚಾರದಲ್ಲಿ ಹೈಕಮಾಂಡ್ ಅನ್ನೂ ಒಪ್ಪಿಸುತ್ತೇನೆ. ಶಿಕಾರಿಪುರ ಕ್ಷೇತ್ರಕ್ಕಿಂತಲೂ ಹೆಚ್ಚಿನ ಆದ್ಯತೆ ತೇರದಾಳಕ್ಕೆ ನೀಡುತ್ತೇನೆ.ಇಲ್ಲಿ ನಾನೇ ಸ್ಪರ್ಧಿಸುತ್ತಿದ್ದೇನೆ ಎಂದು ಭಾವಿಸಿ ಸಿದ್ದು ಸವದಿ ಅವರನ್ನು 25 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿ ಎಂದರು. ಬಿಜೆಪಿ ಅಧಿಕಾರಕ್ಕೆ ಬಂದರೆ ಬಜೆಟ್‌ನಲ್ಲಿ ನೇಕಾರರಿಗಾಗಿ ₹10 ಸಾವಿರ ಕೋಟಿ ಹಣ ಮೀಸಲಿಡುತ್ತೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.