
ಬೆಂಗಳೂರು, [ನ.03]: ಈಗಾಗಲೇ ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ಸಂಬಂಧ ಸಾಕಷ್ಟು ಪರ-ವಿರೋಧಗಳು ವ್ಯಕ್ತವಾಗುತ್ತಿವೆ.
ಕಳೆದ ವರ್ಷ ಟಿಪ್ಪು ಜಯಂತಿ ಆಚರಣೆ ವೇಳೆ ನಡೆದ ಹಿತಕರ ಘಟನೆಗಳಿಂದಾಗಿ ಈ ಬಾರಿ ಟಿಪ್ಪು ಜಯಂತಿ ಆಚರಣೆ ಮಾಡಬೇಕೋ, ಬೇಡವೋ ಎನ್ನುವ ಚರ್ಚೆಗಳು ನಡೆದಿವೆ.
‘ಟಿಪ್ಪುವನ್ನು ಇತಿಹಾಸದಿಂದಲೇ ತಿರಸ್ಕರಿಸಬೇಕು’
ಈ ಹಿನ್ನೆಲೆಯಲ್ಲಿ ಟಿಪ್ಪು ಜಯಂತಿ ಆಚರಣೆ ಕುರಿತ ಸಾಧಕ-ಬಾಧಕಗಳ ಕುರಿತು ಇಂದು [ಶನಿವಾರ] ವಿಧಾನಸೌಧದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಜಯಮಾಲೆ ನೇತೃತ್ವದಲ್ಲಿ ಸಭೆ ನಡೆಯಿತು.
ಟಿಪ್ಪು ಜಯಂತಿ ಆಚರಿಸಬೇಕೋ ಬೇಡವೋ? ಇದರಿಂದ ಆಗುವ ಸಾಧಕ-ಬಾಧಕಗಳ ಬಗ್ಗೆ ಚರ್ಚೆಗಳು ನಡೆದವು. ಅಂತಿಮವಾಗಿ ನವೆಂಬರ್ 10ಕ್ಕೆ ಟಿಪ್ಪು ಜಯಂತಿ ಆಚರಣೆಗೆ ನಿರ್ಧಾರಿಸಲಾಗಿದೆ.
ಈ ಬಗ್ಗೆ ಮಾತನಾಡಿರುವ ಜಯಮಾಲಾ, ನವೆಂಬರ್ 10ರಂದು ಟಿಪ್ಪು ಜಯಂತಿ ಆಚರಣೆಗೆ ನಿರ್ಧಾರಿಸಲಾಗಿದ್ದು, ಕಾರ್ಯಕ್ರಮದಲ್ಲಿ ಎಲ್ಲಾ ಸಚಿವರು ಭಾಗಿ ಆಗುತ್ತಾರೆ ಎಂದು ಸ್ಪಷ್ಟಪಡಿಸಿದರು.
ಈ ಹಿಂದೆ ಯಡಿಯೂರಪ್ಪ ಟಿಪ್ಪು ಟೋಪಿ ಹಾಕಿದ್ರು . ಈಗ ಬಿಜೆಪಿ ವಿರೋಧ ಮಾಡ್ತಿರೋದು ಸರಿಯಲ್ಲ. ಟಿಪ್ಪು ಜಯಂತಿ ವೇಳೆ ಗಲಾಟೆ ಮಾಡಿದ್ರೆ ಬಿಜೆಪಿಯೇ ಹೊಣೆ. ಜನರ ರಕ್ಷಣೆ ನಮ್ಮ ಹೊಣೆ ಎಂದು ಸಚಿವೆ ಜಯಮಾಲಾ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.