
ಬೆಂಗಳೂರು [ಜೂ.21] : ಲೋಕಸಭಾ ಚುನಾವಣೆ ವೇಳೆ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ ನೀಡಿರುವ ಕುರಿತು ಆದಾಯ ತೆರಿಗೆ ಇಲಾಖೆಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದನ್ನು ನೋಡಿದರೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಐಟಿ ಅಧಿಕಾರಿಗಳ ಕೈ-ಕಾಲು ಹಿಡಿದಿರಬಹುದು ಎಂದು ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾಗಿ ಸೋತಿರುವ ಎ.ಮಂಜು ವಾಗ್ದಾಳಿ ಮಾಡಿದ್ದಾರೆ.
ಗುರುವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಅಫಿಡವಿಟ್ ನಲ್ಲಿ ಸುಳ್ಳು ದಾಖಲೆ ನೀಡಿರುವ ಬಗ್ಗೆ ಕೋರ್ಟ್ ಮೆಟ್ಟಿಲೇರುತ್ತೇನೆ. ಶುಕ್ರವಾರ ಹೈಕೋರ್ಟ್‌ನಲ್ಲಿ ಈ ಸಂಬಂಧ ರಿಟ್ ಅರ್ಜಿ ಸಲ್ಲಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೂಡ ಭೇಟಿಯಾಗಿ ದೂರು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
'ನಿಖಿಲ್-ಪ್ರಜ್ವಲ್ ಸದ್ಯ ತೆರೆ ಮರೆಯಲ್ಲಿ ಇರೋದು ಸೂಕ್ತ'
ಪ್ರಜ್ವಲ್ ರೇವಣ್ಣ ಅವರು ತಮ್ಮ ಆದಾಯ ತೆರಿಗೆ ಬಗ್ಗೆ ಸುಳ್ಳು ಮಾಹಿತಿ ನೀಡಿರುವುದನ್ನು ದಾಖಲೆ ಸಮೇತ ಐಟಿ ಇಲಾಖೆಗೆ ದೂರು ನೀಡಿದ್ದೇವೆ. ಇನ್ನು ಕೂಡ ಯಾವುದೇ ಕ್ರಮ ಕೈಗೊಂಡಿಲ್ಲ. ಇದನ್ನು ನೋಡಿದರೆ ಮಾಜಿ ಪ್ರಧಾನಿಗಳ ಮೊಮ್ಮಗ ಎಂದು ಐಟಿ ಅಧಿಕಾರಿಗಳು ಸುಮ್ಮನಾಗಿದ್ದಾರೆಯೇ ಎಂದು ಖಾರವಾಗಿ ಪ್ರಶ್ನಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.