
ಮುಂಬೈ(ಸೆ.5): 'ಬೇಟಿ ಪಡಾವೋ, ಬೇಟಿ ಬಚಾವೋ' ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಘೋಷವಾಕ್ಯ. ಆದರೆ ದೇಶದ ಹೆಣ್ಣುಮಕ್ಕಳ ಬಗ್ಗೆ ಬಿಜೆಪಿ ನಾಯಕರೇ ಕೀಳು ಮಟ್ಟದ ಮಾತುಗಳನ್ನಾಡಿ ಮೋದಿಗೆ ಮುಜುಗರ ತರುತ್ತಿರುವುದು ಮಾತ್ರ ವಿಪಾರ್ಯಸ.
ನೀವು ಇಷ್ಟಪಟ್ಟ ಹುಡುಗಿ ನಿಮ್ಮ ಪ್ರೀತಿಯನ್ನು ನಿರಾಕರಿಸಿದರೆ ನನಗೆ ತಿಳಿಸಿ ಅವಳನ್ನು ಎತ್ತಾಕೊಂಡು ಬಂದು ನಿಮಗೆ ಒಪ್ಪಿಸುತ್ತೇನೆ ಎಂದು ಮಹಾರಾಷ್ಟ್ರದ ಬಿಜೆಪಿ ಶಾಸಕ ರಾಮ್ ಕದಮ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮಹಾರಾಷ್ಟ್ರದ ಸುಬರ್ ಬನ್ ಘಟಕೋಪುರ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ರಾತ್ರಿ ಆಯೋಜಿಸಲಾಗಿದ್ದ ದಹಿ ಹಂಡಿ ಒಡೆಯುವ ಕಾರ್ಯಕ್ರಮದಲ್ಲಿ ಯುವಕರನ್ನು ಉದ್ದೇಶಿಸಿ ರಾಮ್ ಕದಮ್ ಈ ರೀತಿ ಹೇಳಿಕೆ ನೀಡಿದ್ದು ಜನರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಹೆಚ್ಚಾಗಿ ಯುವಕರು ನನ್ನ ಬಳಿಗೆ ಹುಡುಗಿ ಪ್ರೀತಿ ನಿರಾಕರಿಸಿದ್ದಕ್ಕಾಗಿ ಸಹಾಯ ಕೇಳಿಕೊಂಡು ಬರುತ್ತಾರೆ. ಹಾಗೇ ನೀವು ಸಹ ಇಷ್ಟಪಟ್ಟ ಯುವತಿಯನ್ನು ವಿವಾಹವಾಗಬೇಕಾದರೇ ಹೇಳಿ ನಾನು ಕಿಡ್ನಾಪ್ ಮಾಡಿಕೊಂಡು ಬಂದು ನಿಮಗೆ ಒಪ್ಪಿಸುತ್ತೇನೆ ಎಂದು ಹೇಳಿದ್ದಾರೆ.
ಬಿಜೆಪಿ ಶಾಸಕರ ಈ ಹೇಳಿಕೆಯ ವಿಡಿಯೋವನ್ನು ಎನ್‌ಸಿಪಿ ಶಾಸಕ ಜೀತೆಂದ್ರ ಆವ್ಹದ್ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಕಾನೂನು ರೂಪಿಸಬೇಕಾದರೇ ಈ ರೀತಿ ಬಹಿರಂಗವಾಗಿ ಹೇಳಿಕೆ ನೀಡಿದರೆ ಮಹಿಳೆಯರಿಗೆ ಎಲ್ಲಿದೆ ಸುರಕ್ಷೆ ಎಂದು ಪ್ರಶ್ನಿಸಿದ್ದಾರೆ.
ಇನ್ನು ರಾಮ್ ಕದಮ್ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಮಿತ್ರಪಕ್ಷ ಶಿವಸೇನೆ ಮತ್ತು ಪ್ರತಿಪಕ್ಷ ಎನ್‌ಸಿಪಿ, ಶಾಸಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.