
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸುವ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಜಾತ್ಯತೀತ ಪಕ್ಷಗಳು ಒಟ್ಟಾಗಿ ಚುನಾವಣೆಗೆ ಹೋಗುವುದು ಒಳಿತು ಎಂಬ ಅಭಿಪ್ರಾಯ ನನ್ನದು. ಹೀಗಾಗಿ, ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸುವ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದರು.
ಬಿಜೆಪಿಯ ಸಂವಿಧಾನ ವಿರೋಧಿ ನಡೆಗಳಿಂದ ದೇಶದಲ್ಲಿ ಹಲವಾರು ಸಮಸ್ಯೆಗಳು ಸೃಷ್ಟಿಯಾಗಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಸುಳ್ಳಿನ ಗೋಪುರ ಕಟ್ಟುವುದು ಬಿಟ್ಟು ಬೇರೇನೂ ಮಾಡುತ್ತಿಲ್ಲ. ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸರ್ಕಾರ ರಚನೆಯಾಗುವುದು ಪ್ರಜಾಪ್ರಭುತ್ವ ಹಾಗೂ ದೇಶಕ್ಕೆ ಒಳ್ಳೆಯದು ಎಂಬ ಕಾರಣಕ್ಕಾಗಿ ಮೈತ್ರಿ ಮಾಡಿಕೊಂಡಿದ್ದೇವೆ. ದೇಶದ ಒಳತಿಗಾಗಿ ಲೋಕಸಭೆ ಚುನಾವಣೆ ವೇಳೆಯಲ್ಲೂ ಮೈತ್ರಿ ಮುಂದುವರೆಸುವ ಬಗ್ಗೆ ಮಾತುಕತೆ ನಡೆಸುತ್ತೇವೆ ಎಂದು ಅವರು ಹೇಳಿದರು.
ರಾಜ್ಯದ ಜನತೆ ಆಡಳಿತ ವಿರೋಧಿ ತೀರ್ಪು ನೀಡಿಲ್ಲ. ಬಿಜೆಪಿಗೆ ಹೆಚ್ಚು ಸ್ಥಾನಗಳು ಬಂದಿದ್ದರೂ ರಾಜ್ಯದ ಜನ ಕಾಂಗ್ರೆಸ್‌ಗೆ ಹೆಚ್ಚು ಮತ ನೀಡಿದ್ದಾರೆ. ಶೇಕಡಾವಾರು ಮತ ಪ್ರಮಾಣದಲ್ಲಿ ಕಾಂಗ್ರೆಸ್ ಮುಂದಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಇನ್ನೂ ಹೆಚ್ಚಿನ ಸ್ಥಾನ ಪಡೆದು ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ದೇಶದ ಕಡಿಮೆ ಅವಧಿಯ ಮುಖ್ಯಮಂತ್ರಿ ಬಿಎಸ್‌ವೈ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.