
ಬೆಂಗಳೂರು (ಆ.17): ಹಿಂದಿನ ಸರ್ಕಾರಗಳು ಜಾರಿಗೆ ತಂದಿರುವ ಜನಪರ ಯೋಜನೆಗಳನ್ನು ರದ್ದುಪಡಿಸಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಅಧಿಕಾರಕ್ಕೆ ಬಂದ ಬಳಿಕ ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಮತ್ತು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಆರಂಭಿಸಲಾದ ಮಹಾತ್ವಾಕಾಂಕ್ಷಿ ಯೊಜನೆಗಳನ್ನು ಕೈಬಿಡಲು ಬಿಜೆಪಿಯು ಮುಂದಾಗಿದೆ ಎಂದು ಹೇಳಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಸಿಎಂ, ಅಂತಹ ಯಾವುದೇ ಪ್ರಸ್ತಾವನಮೆ ಸರ್ಕಾರದ ಮುಂದಿಲ್ಲ ಎಂದು ಹೇಳಿದ್ದಾರೆ.
ಜನಪ್ರಿಯ ಯೋಜನೆಗಳನ್ನು ರದ್ದುಪಡಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಅನ್ನಭಾಗ್ಯ ಯೋಜನೆ ಮುಂದುವರಿಸಲು ಅನುದಾನ ಬಿಡುಗಡೆಯ ಕಡತಕ್ಕೆ ಈಗಾಗಲೇ ಸಹಿ ಮಾಡಿದ್ದೇನೆ, ಎಂದು ಯಡಿಯೂರಪ್ಪ ಪ್ರಕಟಿಸಿದ್ದಾರೆ.
ಆ ಹಿನ್ನೆಲೆಯಲ್ಲಿ, ಪ್ರತಿಕ್ರಿಯಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿ ಆ ರೀತಿಯೇನಾದರೂ ಮಾಡಿದರೆ ತಾನು ಬೀದಿಗಿಳಿದು ಪ್ರತಿಭಟನೆ ಮಾಡುತ್ತೇನೆ ಎಂದು ಎಚ್ಚರಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.