ಲಿಂಗಾಯಿತ ಸ್ವತಂತ್ರ ಧರ್ಮ ಶಿಫಾರಸ್ಸಿಗೆ ಸಿದ್ದ: ಸಿಎಂ

By Suvarna Web DeskFirst Published Jul 21, 2017, 5:43 PM IST
Highlights

ಲಿಂಗಾಯಿತ ಧರ್ಮವನ್ನು ಪ್ರತ್ಯೇಕ ಧರ್ಮವೆಂದು ಘೋಷಿಸಬೇಕು ಎನ್ನುವ ಕೂಗು ಹೆಚ್ಚಾಗಿರುವ ಬೆನ್ನಲ್ಲೇ, ಲಿಂಗಾಯಿತ ಧರ್ಮವನ್ನು ಪ್ರತ್ಯೇಕ ಧರ್ಮ ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು (ಜು.21): ಲಿಂಗಾಯಿತ ಧರ್ಮವನ್ನು ಪ್ರತ್ಯೇಕ ಧರ್ಮವೆಂದು ಘೋಷಿಸಬೇಕು ಎನ್ನುವ ಕೂಗು ಹೆಚ್ಚಾಗಿರುವ ಬೆನ್ನಲ್ಲೇ, ಲಿಂಗಾಯಿತ ಧರ್ಮವನ್ನು ಪ್ರತ್ಯೇಕ ಧರ್ಮ ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಯಾವುದೇ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರ ಇಲ್ಲ. ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬಹುದಷ್ಟೇ. ಸಮುದಾಯದ ಮುಖಂಡರೊಂದಿಗೆ ಚರ್ಚಿಸಿ ಬಳಿಕ ಕೇಂದ್ರದ ಜೊತೆ ಮಾತುಕತೆ ನಡೆಸಲಿದ್ದೇನೆ ಎಂದು ಸಿಎಂ ಹೇಳಿದ್ದಾರೆ.

ಲಿಂಗಾಯಿತ ಧರ್ಮವನ್ನು ಸ್ವತಂತ್ರ ಧರ್ಮವೆಂದು ಘೋಷಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಬಸವಕೇಂದ್ರ. ಅಕ್ಕನ ಬಳಗ, ಅಖಿಲ ಭಾರತ ಶರವಣ ಸಾಹಿತ್ಯ ಪರಿಷತ್, ವಿಶ್ವ ಲಿಂಗಾಯಿತ ಸಮಿತಿ ಕೇಂದ್ರ ಘಟಕ, ಅಖಿಲ ಕರ್ನಾಟಕ ಲಿಂಗಾಯಿತ ಒಳಪಂಗಡಗಳ ಏಕತಾ ಸಮಿತಿ ಹಾಗೂ ಸಾಹಿತಿಗಳು ಸಿಎಂಗೆ ಮನವಿ ಸಲ್ಲಿಸಿದ್ದಾರೆ.

click me!