
ಬೆಂಗಳೂರು (ಜ.24): ಸಿಎಂ ಸಿದ್ದರಾಮಯ್ಯ ಸಂಪುಟದಿಂದ ಮತ್ತೊಂದು ವಿಕೆಟ್ ಪತನವಾಗುವ ಸಾಧ್ಯತೆಯಿದೆ.
ಸಣ್ಣ ಕೈಗಾರಿಕೆ ಸಚಿವ ರಮೇಶ್ ಜಾರಕಿಹೊಳಿ ಶೀಘ್ರ ರಾಜೀನಾಮೆ ಕೊಡುವ ಸಂದರ್ಭ ಎದುರಾಗಲಿದೆ ಎಂಬ ಗುಸುಗುಸು ಕೆಪಿಸಿಸಿ ವಲಯದಲ್ಲಿ ಕೇಳಿ ಬರುತ್ತಿದೆ.
ಇತ್ತೀಚೆಗೆ ರಮೇಶ್ ಜಾರಕಿಹೊಳಿಯ ಗೋಕಾಕ್ ಮತ್ತು ಬೆಂಗಳೂರಿನ ಮನೆಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ ನಡೆದಿತ್ತು. ಶುಕ್ರವಾರದಿಂದ ಸತತ 4 ದಿನಗಳ ಕಾಲ ಐಟಿ ಅಧಿಕಾರಿಗಳು ಭೂತಗನ್ನಡಿ ಹಿಡಿದು ಮಹತ್ವದ ದಾಖಲೆಗಳನ್ನು ಕಲೆ ಹಾಕಿದ್ದಾರೆ.
ಇದರಲ್ಲಿ ಬೇನಾಮಿ ಅಥವಾ ಅಘೋಷಿತ ಆಸ್ತಿ ಮೌಲ್ಯವೇ 165 ಕೋಟಿ ಎಂದು ಗೊತ್ತಾಗಿದೆ. ಜತೆಗೆ, 12 ಕೆಜಿಗೂ ಹೆಚ್ಚು ಚಿನ್ನ ಪತ್ತೆಯಾಗಿದೆ.
ಹೀಗಾಗಿ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಗೋಕಾಕ್ ಸಾಹುಕಾರ್ ಅವರಿಂದ ವಿವರಣೆ ಕೇಳಿದ್ದಾರೆ. ಈ ಸಂಬಂಧ ಮಾತಾಡಿರುವ ರಮೇಶ್ ಜಾರಕಿಹೊಳಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.