ಅಭಿನಂದನೆ ವೀರ: ವೀರಚಕ್ರ ಪ್ರಶಸ್ತಿಗೆ ಭಾಜನರಾದ ಅಭಿನಂದನ್!

Published : Aug 14, 2019, 07:53 PM IST
ಅಭಿನಂದನೆ ವೀರ: ವೀರಚಕ್ರ ಪ್ರಶಸ್ತಿಗೆ ಭಾಜನರಾದ ಅಭಿನಂದನ್!

ಸಾರಾಂಶ

ವಿಂಗ್ ಕಮಾಂಡರ್ ಅಭಿನಂದನ್’ಗೆ ವೀರಚಕ್ರ ಪ್ರಶಸ್ತಿ| ನಾಳೆ(ಆ.15)ರಂದು ಅಭಿನಂದನ್’ಗೆ ಪ್ರಶಸ್ತಿ ಪ್ರದಾನ|  ಪಾಕ್ ಎಫ್-16 ಯುದ್ಧ ವಿಮಾನ ಹೊಡೆದುರುಳಿಸಿದ್ದ ಅಭಿನಂದನ್| ಮಿಗ್-21 ಪತನವಾಗಿ ಪಾಕ್ ವಶದಲ್ಲಿದ್ದ ಅಭಿನಂದನ್| ಪಾಕ್ ವಶದಿಂದ ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದ ವಿಂಗ್ ಕಮಾಂಡರ್|

ನವದೆಹಲಿ(ಆ.14): ಪಾಕ್ ಯುದ್ಧ ವಿಮಾನ ಹೊಡೆದುರುಳಿಸಿ ಪಾಕ್ ವಶದಿಂದ ಭಾರತಕ್ಕೆ ಸುರಕ್ಷಿತವಾಗಿ ಮರಳಿದ್ದ, ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ವೀರಚಕ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. 

ನಾಳೆ(ಆ.15)ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ನಡೆಯುವ ಸಮಾರಂಭಧಲ್ಲಿ ಅಭಿನಂದನ್ ಅವರಿಗೆ ವೀರ ಚಕ್ರ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. 

ಫೆ.27 ರಂದು ಪಾಕಿಸ್ತಾನದ ಎಫ್-16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದ ಅಭಿನಂದನ್ ತಮ್ಮ ಮಿಗ್-21 ಅಪಘಾತಕ್ಕೀಡಾದ ಪರೀಣಾಮ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಬಿದ್ದು ಪಾಕ್ ಸೈನಿಕರಿಂದ ಬಂಧನಕ್ಕೊಳಗಾಗಿದ್ದರು.

ಆದರೆ ಸತತ ಪ್ರಯತ್ನಗಳ ನಂತರ ಅಭಿನಂದನ್ ಅವರನ್ನು ಸುರಕ್ಷಿತವಾಗಿ ಭಾರತಕ್ಕೆ ಮರಳಿಸಲು ಪಾಕಿಸ್ತಾನ ಸಮ್ಮತಿ ಸೂಚಿಸಿತ್ತು. ವಾಘಾ ಗಡಿಯ ಮೂಲಕ ಅಭಿನಂದನ್ ಭಾರತಕ್ಕೆ ಸುರಕ್ಷಿತವಾಗಿ ಮರಳಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟ್ರಂಪ್‌ ತೆರಿಗೆ ಶಾಕ್‌ಗೆ ಚೀನಾ ದಾಖಲೆಯ ತಿರುಗೇಟು
‘ಋತುಚಕ್ರ ರಜೆ’ಗೆ ತಡೆ ನೀಡಿ ಹಿಂಪಡೆದ ಹೈಕೋರ್ಟ್‌