
ಉಡುಪಿ (ನ.13): ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದಿಂದ ಕ್ಲೀನ್ ಚಿಟ್ ಪಡೆದ ಪ್ರಕರಣಗಳ ಮರು ತನಿಖೆಗೆ ಆದೇಶಿಸಿ, ಭ್ರಷ್ಟಾಚಾರಿಗಳನ್ನು ಜೈಲಿಗೆ ಕಳುಹಿಸುವುದಾಗಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಯಕ್ಷ ಬಿ.ಎಸ್ .ಯಡಿಯೂರಪ್ಪ ಘೋಷಿಸಿದ್ದಾರೆ.
ಭಾನುವಾರ ಉಡುಪಿಯಲ್ಲಿ ಪರಿವರ್ತನಾ ಯಾತ್ರೆಯ ಸಾರ್ವಜನಿಕ ಸಮಾವೇಶದಲ್ಲಿ ಅವರು ಮಾತನಾಡಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ಎ.ಸಿ.ಬಿ.ಯನ್ನು ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ನಾಯಕರ ಮೇಲಿನ ಭ್ರಷ್ಟಾಚಾರದ ದೂರುಗಳಿಂದ ಕ್ಲೀನ್ ಚಿಟ್ ಪಡೆದುಕೊಳ್ಳುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾಯುಕ್ತದ ಅಧಿಕಾರ ಮೊಟಕುಗೊಳಿಸಿ, ಎಸಿಬಿಯನ್ನು ರಚಿಸಿದ್ದೇ ತನ್ನವರನ್ನು ಭ್ರಷ್ಟಾಚಾರದ ಆರೋಪಗಳಿಂದ ರಕ್ಷಿಸುವುದಕ್ಕೆ ಎಂದು ಆರೋಪಿಸಿದ ಯಡಿಯೂರಪ್ಪ, ತಾವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ತಕ್ಷಣ ಸಿದ್ದರಾಮಯ್ಯ ಸಹಿತ ಎಲ್ಲಾ ಭ್ರಷ್ಟಾಚಾರದ ಆರೋಪಿಗಳನ್ನು ಎಸಿಬಿಯಿಂದಲೇ ತನಿಖೆಗೊಳಪಡಿಸುವುದಾಗಿ ಹೇಳಿದರು.
ಕಾನೂನು ಪಾಲನೆ ವೈಫಲ್ಯ:
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 1.24 ಲಕ್ಷ ಕ್ರಿಮಿನಲ್ ಕೇಸುಗಳು ದಾಖಲಾಗಿವೆ. 4102 ಮಹಿಳೆಯರ ಮೇಲೆ ಅತ್ಯಾಚಾರದ ಪ್ರಕರಣಗಳು ದಾಖಲಾಗಿವೆ. 2536 ಮಹಿಳೆಯರ ಕೊಲೆಗಳಾಗಿವ. 426 ಮಂದಿ ಮಹಿಳೆಯರ ಅಪಹರಣ ಆಗಿದೆ. ಮಹಿಳೆಯರ ಮೇಲೆಯೇ ಇಷ್ಟು ದೌರ್ಜನ್ಯ ನಡೆಯುತ್ತಿರುವಾಗ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಲವಾಗಿದೆ ಎನ್ನುವುದಕ್ಕೆ ಬೇರೆ ಯಾವ ಸಾಕ್ಷಿ ಬೇಕು ಎಂದವರು ಪ್ರಶ್ನಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನೇ ಕಾಂಗ್ರೆಸ್ ಮುಕ್ತಗೊಳಿಸಬೇಕು ಎಂದು ಪಣ ತೊಟ್ಟಿದ್ದಾರೆ. ಅದಕ್ಕೆ ಮೊದಲು ಕರ್ನಾಟಕವನ್ನು ಕಾಂಗ್ರೆಸ್ ಮುಕ್ತಗೊಳಿಸಬೇಕು ಎಂದ ಅವರು, ಯಡಿಯೂರಪ್ಪನನ್ನು ಮುಖ್ಯಮಂತ್ರಿ ಮಾಡುವುದಕ್ಕಾಗಿ ಬಿಜೆಪಿಗೆ ಮತ ಹಾಕಬೇಡಿ, ಆದರೆ ನಿಮ್ಮ ನೆಮ್ಮದಿಯ, ಸ್ವಾಭಿಮಾನಿ ಬದುಕಿಗಾಗಿ ಬಿಜೆಪಿಗೆ ಮತ ನೀಡಿ ಎಂದವರು ಮನವಿ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.