
ವಿಜಯಪುರ [ಮೇ. 23]: ಕಾಂಗ್ರೆಸ್ ಶಾಸಕ ಎಂ.ಬಿ. ಪಾಟೀಲ್ ವಿರುದ್ದ ಅಶ್ಲೀಲ ಪದ ಬಳಕೆ ಆರೋಪದ ಹಿನ್ನೆಲೆಯಲ್ಲಿ ಮಹಿಳೆಯೋರ್ವಳ ಮುಖಕ್ಕೆ ಮಸಿ ಬಳಿದ ಘಟನೆ ನಡೆದಿದೆ. ಇಲ್ಲಿನ ರಬಕವಿ ಗ್ರಾಮದ ಚಂದ್ರೆವ್ವ ಕೋಲಾರ ಎಂಬ ಮಹಿಳೆ ಎಂ.ಬಿ. ಪಾಟೀಲ್ ವಿರುದ್ದ ಅಶ್ಲೀಲ ಪದ ಬಳಸಿದ್ದಾಳೆ ಎಂದು ಆರೋಪಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ನಾಯಕ ವಿಜುಗೌಡ ಪಾಟೀಲ್ ನೇತೃತ್ವದಲ್ಲಿ ಮಹಿಳಾ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಚಂದ್ರೆವ್ವಳನ್ನು ತಡೆದು ಆಕೆಯ ಮುಖಕ್ಕೆ ಮಸಿ ಬಳಿದಿದ್ದಾರೆ. ಇದಕ್ಕೂ ಮೊದಲು ನಿನ್ನೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ್ದ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಸೂಕ್ತ ಕ್ರಮಕ್ಕೆ ಆಗ್ರಹಿಸಿ ಮನವಿ ಸಲ್ಲಿಸಿದ್ದರು.
ಇತ್ತಿಚೀಗೆ ಜರುಗಿದ ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ್ದ ಚಂದ್ರೆವ್ವ, ಎಂ.ಬಿ. ಪಾಟೀಲ್ ವಿರುದ್ದ ವಾಗ್ದಾಳಿ ನಡೆಸುವ ಸಂದರ್ಭದಲ್ಲಿ ಅಶ್ಲೀಲ ಪದ ಬಳಿಸಿದ್ದರು ಎಂದು ಹೇಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.