ಕೇರಳದಲ್ಲಿ ಮಹಿಳಾ ಪೇದೆಗೆ ಬೆಂಕಿ ಇಟ್ಟ ಪೊಲೀಸ್‌!

Published : Jun 16, 2019, 09:22 AM IST
ಕೇರಳದಲ್ಲಿ ಮಹಿಳಾ ಪೇದೆಗೆ ಬೆಂಕಿ ಇಟ್ಟ ಪೊಲೀಸ್‌!

ಸಾರಾಂಶ

ಕೇರಳದಲ್ಲಿ ಮಹಿಳಾ ಪೇದೆಗೆ ಬೆಂಕಿ ಇಟ್ಟಪುರುಷ ಪೊಲೀಸ್‌| ಆರೋಪಿಗೆ ಐಸಿಯುನಲ್ಲಿ ಚಿಕಿತ್ಸೆ

ಮಾವೆಲಿಕ್ಕರ[ಜೂ.16]: 34 ವರ್ಷದ ಮಹಿಳಾ ಪೇದೆಯೊಬ್ಬರಿಗೆ ಹರಿತ ಆಯುಧದಿಂದ ಹಲ್ಲೆ ನಡೆಸಿದ ಪೊಲೀಸ್‌ ಸಿಬ್ಬಂದಿಯೊಬ್ಬ, ಬಳಿಕ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಂದಿರುವ ಘಟನೆ ಕೇರಳದಲ್ಲಿ ನಡೆದಿದೆ. ಮೃತರನ್ನು ಸೌಮ್ಯ ಪುಷ್ಪಾಕರನ್‌ ಎಂದು ಗುರುತಿಸಲಾಗಿದೆ.

ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಈಕೆಯನ್ನು ಸಂಚಾರಿ ಪೊಲೀಸ್‌ ಸಿಬ್ಬಂದಿಯಾದ ಅಜಸ್‌ ಕಾರಿನಲ್ಲಿ ಹಿಂಬಾಲಿಸಿ ಸೌಮ್ಯ ಅವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಸಿದ್ದಾನೆ. ಬಳಿಕ ಆಕೆಯ ಮೇಲೆ ಹರಿತ ಆಯುಧದಿಂದ ಹಲ್ಲೆ ನಡೆಸಿದ್ದಾನೆ. ತಪ್ಪಿಸಿಕೊಳ್ಳಲು ಸಮೀಪದ ಮನೆಯೊಂದಕ್ಕೆ ತೆರಳಿದ ಸೌಮ್ಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದಾನೆ. ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಆರೋಪಿಗೂ ಶೇ.40 ರಷ್ಟುಸುಟ್ಟಗಾಯಗಳಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೌಮ್ಯ ಪತಿ ವಿದೇಶದಲ್ಲಿದ್ದು, ಈ ದಂಪತಿಗೆ ಮೂರು ಮಕ್ಕಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ