
ಇಸ್ತಾಂಬುಲ್(ಅ.16): 10 ವರ್ಷಗಳ ಮೊದಲು ತನ್ನ ಪತ್ನಿಗೆ ಡೈವೋರ್ಸ್ ನೀಡಿದ ಪತಿಯೊಬ್ಬ ನಡುರಸ್ತೆಯಲ್ಲೇ 25 ಬಾರಿ ಇರಿದು ಕೊಂದ ಆಘಾತಕಾರಿ ಘಟನೆ ಟರ್ಕಿಯಲ್ಲಿ ನಡೆದಿದೆ. ಈ ಅಮಾನುಷ ಕೃತ್ಯದ ದೃಶ್ಯಾವಳಿಗಳು ಇಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಸದ್ಯ ಸಾಮಾಜಿಕ ಜಾಲಾತಾಣಗಳಲ್ಲಿ ವೈರಲ್ ಆಗುತ್ತಿದೆ.
ಸಿಗ್'ಡೆಂ ಕಾಕ್ ಎಂಬ ಮಹಿಳೆ ಜನನಿಬಿಡ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಆಕೆಯ ಮಾಜಿ ಪತಿ ಮುಸ್ತಫಾ ಕರಾ ಅಡ್ಡಗಟ್ಟಿ ಆಕೆಯ ಕೂದಲೆಳೆದು ಹಲ್ಲೆ ನಡೆಸಿದ್ದಾನೆ. ಬಳಿಕ 25 ಬಾರಿ ಇರಿದು ಮಾರಣಾಂತಿಕ ಗಾಯಗೊಳಿಸಿ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಇದನ್ನೆಲ್ಲಾ ಕಂಡ ಸಾರ್ವಜನಿಕರು ಆತನನ್ನು ಹಿಡಿದು ಪೊಲೀಸರಿಗೊಪ್ಪಿಸಿ, ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದ ಸಿಗ್'ಡೆಂ ಅನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಆಕೆ ಕೊನೆಯುಸಿರೆಳೆದಿದ್ದಾಳೆ.
ಸಿಗ್'ಡೆಂ ಹಾಗೂ ಮುಸ್ತಫಾ ಕಾರ್'ಗೆ ಈ ಮೊದಲು ಮದುವೆಯಾಗಿದ್ದು, ಕೆಲವೊಂದು ಮನಸ್ತಾಪಗಳಿಂದ 10 ವರ್ಷಗಳ ಮೊದಲು ವಿಚ್ಛೇದನವಾಗಿತ್ತು. ಇದಾದ ಬಳಿಕ ಸಿಗ್'ಡೆಂಗೆ ಬೇರೆ ವಿವಾಹವಾಗಿದ್ದು, ಇಬ್ಬರು ಮಕ್ಕಳಿದ್ದರು ಎಂಬ ವಿಚಾರ ತಿಳಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.