
ಬೆಳಗಾವಿ: ಕರ್ನಾಟಕ ಸರ್ಕಾರಕ್ಕೆ ಬುದ್ಧಿ ಕಲಿಸಲು ಮರಾಠಿ ಭಾಷಿಕ ಮಹಿಳೆಯರು ಖಡ್ಗ ಹಿಡಿದು ಹೋರಾಟ ನಡೆಸಬೇಕು ಎಂದು ಎಂಇಎಸ್ ಬೆಂಬಲಿತ ಜಿಪಂ ಸದಸ್ಯೆ ಸರಸ್ವತಿ ಪಾಟೀಲ ಬಹಿರಂಗ ಹೇಳಿಕೆ ನೀಡಿದ್ದಾರೆ.
ಕರ್ನಾಟಕ-ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿರುವ ಮರಾಠಿ ಭಾಷಿಕರ ಮೇಲೆ ನಿರಂತರವಾಗಿ ಅನ್ಯಾಯ, ದೌರ್ಜನ್ಯ ಮಾಡುತ್ತ ಬಂದಿದೆ. ಹೀಗಾಗಿ ಕರ್ನಾಟಕ ಸರ್ಕಾರಕ್ಕೆ ಬುದ್ಧಿ ಕಲಿಸಲು ಮರಾಠಿ ಭಾಷಿಕ ಮಹಿಳೆಯರು ಖಡ್ಗ ಹಿಡಿದು ಹೋರಾಟ ಮಾಡಬೇಕು ಎಂದು ಸರಸ್ವತಿ ಪಾಟೀಲ ಹೇಳಿದ್ದಾರೆ.
ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದಲ್ಲಿ ಹುತಾತ್ಮ ವೃತ್ತದಲ್ಲಿ ಗಡಿ ಹೋರಾಟದಲ್ಲಿ ಸಾವಿಗೀಡಾದವರಿಗೆ ಗುರುವಾರ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮ ಎಂಇಎಸ್ ಆಯೋಜಿಸಿತ್ತು. ಇದರಲ್ಲಿ ಪಾಲ್ಗೊಂಡಿದ್ದ ಸರಸ್ವತಿ ಪಾಟೀಲ ತಮ್ಮ ಭಾಷಣದಲ್ಲಿ ಕರ್ನಾಟಕ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.