
ದಾವಣಗೆರೆ (ಡಿ. 01): ಫೇಸ್’ಬುಕ್ ನಲ್ಲಿ ಪರಿಚಯವಾಗಿ ಹುಡುಗಿಯರಿಗೆ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದ ಕಾಮುಕನೊಬ್ಬನಿಗೆ ಮಹಿಳೆಯರೇ ಹಿಗ್ಗಾಮುಗ್ಗಾ ಥಳಿಸಿದ ಘಟನೆ ದಾವಣಗೆರೆ ನಗರದಲ್ಲಿ ನಡೆದಿದೆ.
ಮೆಡಿಕಲ್ ರೆಪ್ರಸೆಂಟೀವ್ ಆಗಿ ಕೆಲಸ ಮಾಡುತ್ತಿದ್ದ ಪವನ್ ಎಂಬ ಅಸಾಮಿ ವಿವಿಧ ಕಾರಣಗಳಿಂದ ಹುಡುಗಿಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ. ಹಾಯ್ ಬಾಯ್ ಮೆಸೇಜ್ ಕಳಸಿ ಕ್ಲೋಸ್ ಆದ ಹುಡುಗಿಯರಿಗೆ ಅಶ್ಲೀಲ ಮೆಸೇಜ್ ಕಳಿಸಿ ಕಿರಿಕಿರಿ ಮಾಡುತ್ತಿದ್ದ ಎನ್ನಲಾಗಿದೆ.
ಇದರಿಂದ ರೋಸಿ ಹೋದ ಹುಡುಗಿಯೊಬ್ಬಳು ಆಸರೆ NGO ಮಹಿಳಾ ಸಂಘಟನೆಗೆ ದೂರು ನೀಡಿದ್ದಳು. ಇಂದು ನಗರದ ಬೇತೂರು ರಸ್ತೆ ಬಳಿ ಹುಡುಗನನ್ನ ಅಡ್ಡಗಟ್ಟಿ ಕೆರಳಿದ ನಾರಿಯರು, ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಸದ್ಯ ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.