
ವಿಧಾನಸಭೆ: ವಿಜಯಪುರದ ಮಹಿಳಾ ವಿಶ್ವವಿದ್ಯಾಲಯ ಇನ್ನು ಮುಂದೆ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಎಂದು ಕರೆಸಿಕೊಳ್ಳಲಿದೆ, ಮಹಿಳಾ ವಿವಿ ಮರುನಾಮಕರಣ ಮಾಡುವ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ತಿದ್ದುಪಡಿ ವಿಧೇಯಕ ಮಂಗಳವಾರ ವಿಧಾನಸಭೆಯಲ್ಲಿ ಅನುಮೋದನೆಗೊಂಡಿತು.
ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ವಿಧೇಯಕ ಮಂಡಿಸಿದರು. ಮರುನಾಮಕರಣವನ್ನು ಸ್ವಾಗತಿಸಿದ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ, ವಿವಿಯ ಗೌರವಕ್ಕೆ ಧಕ್ಕೆ ತರುವಂತಹ ಅವ್ಯವಹಾರಗಳು ಇಲ್ಲಿ ನಡೆದಿವೆ. ಅಕ್ಕಮಹಾದೇವಿ ಹೆಸರಿಗೆ ಕಳಂಕವಾಗಬಾರದು. ಇಲ್ಲಿ ನಡೆದಿರುವ ಅವ್ಯವಹಾರಗಳ ತನಿಖೆ ಚುರುಕುಗೊಳ್ಳಬೇಕಿದೆ. ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕಿದೆ ಎಂದರು.
ಈ ಸಂದರ್ಭದಲ್ಲಿ ಸಚಿವ ರಾಯರೆಡ್ಡಿ, ಅಕ್ರಮವಾಗಿದೆ. ಆದರೆ, ನಮ್ಮ ಸರ್ಕಾರದ ಅವಧಿಯಲ್ಲಲ್ಲ ಎಂದಾಗ ಬಿಜೆಪಿಯ ಗೋವಿಂದ ಕಾರಜೋಳ, ಯಾವ ಸರ್ಕಾರದ ಅವಧಿಯಲ್ಲಾದರೇನು. ಅಕ್ರಮ ಎಸಗಿದ ಕುಲಪತಿ ಮನಸ್ಸಿಗೆ ಬಂದವರಿಗೆ ನೇಮಕಾತಿ ಮಾಡಿ ದೇಶ ಬಿಟ್ಟಿದ್ದಾರೆ. ಇದನ್ನು ಸ್ವತಂ ಮುಖ್ಯಮಂತ್ರಿಯವರೇ ಹೇಳಿದ್ದಾರೆ. ಅಸ್ತಿತ್ವದಲ್ಲೇ ಇಲ್ಲದ ವಿವಿಗಳಿಂದ ಸರ್ಟೀಫಿಕೇಟ ತಂದು ನೇಮಕ ಮಾಡಿದ್ದಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.