ರೈತರಿಗೆ ಡಿ.ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

First Published Jun 19, 2018, 8:43 AM IST
Highlights

ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆಯೊಡ್ಡುವವರಿಗೆ ಪ್ರೋತ್ಸಾಹ ನೀಡುವುದಿಲ್ಲ ಹಾಗೂ ಇಂತಹ ಬೆದರಿಕೆಯನ್ನು ಸಹಿಸುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ರೈತರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. 

ಬೆಂಗಳೂರು :  ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆಯೊಡ್ಡುವವರಿಗೆ ಪ್ರೋತ್ಸಾಹ ನೀಡುವುದಿಲ್ಲ ಹಾಗೂ ಇಂತಹ ಬೆದರಿಕೆಯನ್ನು ಸಹಿಸುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ರೈತರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.  ಟಿ. ನರಸೀಪುರದಲ್ಲಿ ರೈತನೊಬ್ಬ ಬೆಳೆಹಾನಿ ಹಿನ್ನೆಲೆಯಲ್ಲಿ ಆತ್ಮಹತ್ಯೆ ಬೆದರಿಕೆಯೊಡ್ಡಿದ ಘಟನೆಗೆ ಈ ಪ್ರತಿಕ್ರಿಯೆ ನೀಡಿದ ಶಿವಕುಮಾರ್, ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆಯನ್ನು ಯಾರೇ ಹಾಕಿದರೂ ಅದಕ್ಕೆ ಪ್ರೋತ್ಸಾಹಿಸುವುದಿಲ್ಲ. 

ಪ್ರಕೃತಿ  ವಿಕೋಪವು ಮಾನವ ಸೃಷ್ಟಿಯಲ್ಲ. ಪ್ರಕೃತಿ ವಿಕೋಪದ ವೇಳೆ ಆತ್ಮಹತ್ಯೆ ಹೇಡಿತನ. ಆತ್ಮಹತ್ಯೆ ನಿಯಂತ್ರಣಕ್ಕೆ ಕಾನೂನು ಇದೆ ಎಂದು ಹೇಳಿದ್ದಾರೆ. ವಿಧಾನಸೌಧದ ೩ನೇ ಮಹಡಿಯಲ್ಲಿನ 336 ನೇ ಕೊಠಡಿಗೆ ಸೋಮವಾರ ಪೂಜೆ ಸಲ್ಲಿಸಿ ಪ್ರವೇಶಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಬಾರಿ ರಾಜ್ಯದಲ್ಲಿ ವರುಣನ ಕೃಪೆ ಚೆನ್ನಾಗಿದ್ದು, ಉತ್ತಮವಾಗಿ ಬೆಳೆಯಾಗುತ್ತಿದೆ. ಜಲಾಶಯಗಳು ಭರ್ತಿಯಾಗುತ್ತಿವೆ. 

ಕಬಿನಿ ಜಲಾಶಯದಲ್ಲಿ 14 ಟಿಎಂಸಿಯಷ್ಟು ನೀರು ತುಂಬಿದೆ. 6.2 ಟಿಎಂಸಿಯಷ್ಟು ನೀರನ್ನು ಮೆಟ್ಟೂರಿಗೆ ಬಿಡಲಾಗಿದೆ. ಯಾವುದೇ ಅನಾಹುತವಾಗದಂತೆ ಮುಂಜಾಗ್ರತೆ ವಹಿಸಲಾಗಿದೆ. ಜಲಾಶಯಗಳಲ್ಲಿ ಯಾವುದೇ ಅನಾಹುತಗಳು ಜರುಗದಂತೆ ಇಲಾಖಾಧಿಕಾರಿಗಳಿಗೆ ಮತ್ತು ಸ್ಥಳಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

click me!