ಬೇರೆ ಕೆಲಸ ಹುಡ್ಕೊಳ್ಳಿ: ಸಿಬ್ಬಂದಿಗೆ ನೀರವ್‌ ಪತ್ರ!

By Suvarna Web DeskFirst Published Feb 22, 2018, 9:01 AM IST
Highlights

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ 11400 ಕೋಟಿ ರು. ವಂಚನೆ ಎಸಗಿದ ಆರೋಪ ಎದುರಿಸುತ್ತಿರುವ ಉದ್ಯಮಿ ನೀರವ್‌ ಮೋದಿ, ತಮ್ಮ ಕಂಪನಿಯ ಉದ್ಯೋಗಿಗಳಿಗೆ ಬೇರೆಡೆ ಕೆಲಸ ಹುಡುಕಿಕೊಳ್ಳುವಂತೆ ಸಲಹೆ ನೀಡಿದ್ದಾರೆ.

ನವದೆಹಲಿ: ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ 11400 ಕೋಟಿ ರು. ವಂಚನೆ ಎಸಗಿದ ಆರೋಪ ಎದುರಿಸುತ್ತಿರುವ ಉದ್ಯಮಿ ನೀರವ್‌ ಮೋದಿ, ತಮ್ಮ ಕಂಪನಿಯ ಉದ್ಯೋಗಿಗಳಿಗೆ ಬೇರೆಡೆ ಕೆಲಸ ಹುಡುಕಿಕೊಳ್ಳುವಂತೆ ಸಲಹೆ ನೀಡಿದ್ದಾರೆ.

ಕಳೆದ ಕೆಲ ದಿನಗಳಿಂದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಮ್ಮೆಲ್ಲಾ ಬ್ಯಾಂಕ್‌ ಖಾತೆಗಳನ್ನುಜಪ್ತಿ ಮಾಡಿದ್ದಾರೆ. ಜೊತೆಗೆ ತನಿಖಾ ಸಂಸ್ಥೆಗಳು ಕಂಪನಿಯ ದಾಸ್ತಾನುಗಳನ್ನು ವಶಪಡಿಸಿಕೊಂಡಿದ್ದಾರೆ. ಹೀಗಾಗಿ ನಾನು ನಿಮಗೆ ವೇತನ ನೀಡುವುದು ಸಾಧ್ಯವಾಗದು. ಹೀಗಾಗಿ ನೀವೆಲ್ಲಾ ಬೇರೆಡೆ ಉದ್ಯೋಗ ಹುಡುಕಿಕೊಳ್ಳಿ ಎಂದು ಸಿಬ್ಬಂದಿ ನೀರವ್‌ ಮೋದಿ ಇ ಮೇಲ್‌ನಲ್ಲಿ ಸಂದೇಶ ರವಾನಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಆಂಗ್ಲಪತ್ರಿಕೆಯೊಂದು ವರದಿ ಮಾಡಿದೆ.

ವಂಚನೆ ಪ್ರಕರಣ ಸಂಬಂಧ ಸಿಬಿಐ, ಇಡಿ ಸಂಸ್ಥೆಗಳು ನೀರವ್‌ ಮೋದಿಗೆ ಸೇರಿದ ಮನೆ, ಕಚೇರಿ ಮೇಲೆ ದಾಳಿ ನಡೆಸಿ 5000 ಕೋಟಿ ರು.ಗೂ ಹೆಚ್ಚಿನ ಮೊತ್ತದ ನಗದು, ಚಿನ್ನಾಭರಣ ಮತ್ತು ಆಸ್ತಿ ವಶಪಡಿಸಿಕೊಂಡಿವೆ. ಮತ್ತೊಂದೆಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನೀರವ್‌ ಮತ್ತು ಅವರ ಕಂಪನಿಗೆ ಸೇರಿದ ಬ್ಯಾಂಕ್‌ ಖಾತೆಗಳನ್ನು ಜಪ್ತಿ ಮಾಡಿವೆ.

click me!