
ನವದೆಹಲಿ[ಆ.05]: ನಕಾರಾತ್ಮಕ ಯೋಚನೆಯಿಂದ ದೂರ ಉಳಿದು ಧನಾತ್ಮಕ ಮನಸ್ಥಿತಿಯೊಂದಿಗೆ ಕಾರ್ಯನಿರ್ವಹಿಸುವುದರೊಂದಿಗೆ ಪಕ್ಷಕ್ಕೆ ಮತ ಹಾಕದವರ ಮನಗೆಲ್ಲಲು ಯತ್ನಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಸಂಸದರಿಗೆ ಕರೆ ನೀಡಿದ್ದಾರೆ.
ಪಕ್ಷದ 380ಕ್ಕೂ ಹೆಚ್ಚು ಜನಪ್ರತಿನಿಧಿಗಳಿಗೆ ಆಯೋಜಿಸಿದ್ದ ಎರಡು ದಿನಗಳ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಮೋದಿ, ಸಂಸದರು 2024ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಕಾರ್ಯನಿರ್ವಹಿಸಬೇಕಿದೆ. ಕೆಲಸ ಕಾರ್ಯದ ಆಧಾರದ ಮೇಲೆ ಜನರು ತಮ್ಮನ್ನು ಮರು ಆಯ್ಕೆ ಮಾಡುವ ರೀತಿಯಲ್ಲಿ ಸಂಸದರು ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.
ಸಂಸದರು ಪ್ರತಿಯೊಬ್ಬರ ಕಲ್ಯಾಣಕ್ಕಾಗಿ ರಾಜಕಾರಣ ಮಾಡಬೇಕು. ನಕಾರಾತ್ಮಕ ಯೋಚನೆಗಳನ್ನು ಬದಿಗಿಟ್ಟು, ಧನಾತ್ಮಕ ಚಿಂತನೆಯಿಂದ ಕಾರ್ಯನಿರ್ವಹಿಸಬೇಕು. ನಿಮ್ಮ ಕೆಲಸ ಕಾರ್ಯಗಳನ್ನು ನೋಡಿ ಜನರು ನಿಮಗೆ ಹತ್ತಿರ ಆಗುತ್ತಾರೆ ಎಂದು ಮೋದಿ ಸಂಸದರಿಗೆ ಕರೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.