
ನಾಗಪುರ (ಮಾ.29): ಭಾರತದ ರಾಷ್ಟ್ರಪತಿ ಹುದ್ದೆಗೆ ತನ್ನ ಹೆಸರು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಸ್ಪಷ್ಟೀಕರಣ ನೀಡಿದ್ದು, ತಾನು ಆ ಹುದ್ದೆಯನ್ನು ಸ್ವೀಕರಿಸುವುದಿಲ್ಲವೆಂದು ಹೇಳಿದ್ದಾರೆ.
ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿರುವುದು ಎಲ್ಲವೂ ಸಂಭವಿಸುವುದಿಲ್ಲ. ನಾನು ಸಂಘಕ್ಕಾಗಿ ಕೆಲಸ ಮಾಡುತ್ತಿದ್ದೇನೆ. ನನಗೆ ಆ ಹುದ್ದೆಯನ್ನು ಕೊಟ್ಟರೂ ನಾನದನ್ನು ಸ್ವೀಕರಿಸುವುದಿಲ್ಲ, ಎಂದು ಮೋಹನ್ ಭಾಗವತ್ ಹೇಳಿದ್ದಾರೆ.
ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ರಾಷ್ಟ್ರಪತಿ ಹುದ್ದೆಗೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೆಸರನ್ನು ಪ್ರಸ್ತಾಪಿಸಿತ್ತು.
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಧಿಕಾರವಧಿಯು ಮುಂಬರುವ ಜುಲೈಯಲ್ಲಿ ಅಂತ್ಯಗೊಳ್ಳಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.