
ಭೋಪಾಲ್(ಡಿ.06): 12 ಮತ್ತು ಅದಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಗಲ್ಲು ಶಿಕ್ಷೆ ವಿಧಿಸುವ ಮಸೂದೆಯನ್ನು ಅಂಗೀಕರಿಸಿದ ಮಧ್ಯಪ್ರದೇಶ ಸರ್ಕಾರದ ನಡೆಯನ್ನು ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲಿಕ್ ಸ್ವಾಗತಿಸಿದ್ದಾರೆ.
ಮಧ್ಯಪ್ರದೇಶ ಸರ್ಕಾರದ ಈ ನಡೆಗೆ ಹರ್ಷ ವ್ಯಕ್ತಪಡಿಸಿರುವ ಅವರು, ‘ಇದನ್ನು ನಾನು ಸಂಪೂರ್ಣವಾಗಿ ಒಪ್ಪುತ್ತೇನೆ’ ಎಂದಿದ್ದಾರೆ. ‘ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ನಿಲ್ಲಬೇಕು. ಹೆಣ್ಣು ಮಕ್ಕಳು ಕ್ರೀಡೆಯಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು’ ಎಂದು ಸಾಕ್ಷಿ ಹೇಳಿದ್ದಾರೆ.
2016ರ ರಿಯೊ ಒಲಿಂಪಿಕ್ಸ್'ನಲ್ಲಿ 58 ಕೆ.ಜಿ. ಕುಸ್ತಿ ವಿಭಾಗದಲ್ಲಿ ಸಾಕ್ಷಿ ಮಲಿಕ್ ಭಾರತಕ್ಕೆ ಮೊದಲ ಪದಕ ಗೆದ್ದುಕೊಟ್ಟಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.