
ಬೆಂಗಳೂರು (ಅ.31): ನಟ, ನಾಟಕಕಾರ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಪ್ರಾಧ್ಯಾಪಕರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದ ಬಿ.ಎಸ್. ಕೇಶವರಾವ್ ಸೋಮವಾರ ಬೆಂಗಳೂರಿನಲ್ಲಿ ನಿಧನರಾದರು. ಮೈಸೂರಿನ ಫಿಲೋಮಿನ ಕಾಲೇಜಿನಲ್ಲಿ ಇಂಟರ್ ಮೀಡಿಯೇಟ್, ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮೊ, ಮದರಾಸಿನ ಟೆಕ್ನಿಕಲ್ ಇನ್‌ಸ್ಟಿಟ್ಯೂಟ್ ನಿಂದ ಪದವಿ ಪಡೆದಿದ್ದು ಹಿಂದೂಸ್ಥಾನ್ ಕನ್ಟ್ರಕ್ಷನ್ ಕಂಪನಿಯಲ್ಲಿ ಮೇಲ್ವಿಚಾರಕ ರಾಗಿ ಸೇವೆ ಸಲ್ಲಿಸಿದ್ದರು.
ಶಿಕ್ಷಣ ಇಲಾಖೆಯಲ್ಲಿ ಅಧ್ಯಾಪಕರ ವೃತ್ತಿ. ಚಿಂತಾಮಣಿ, ತುಮಕೂರು, ಹಾಸನ, ಕೆ.ಆರ್. ಪೇಟೆ, ಮೈಸೂರು, ಬೆಂಗಳೂ ರು ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದರು. ರಂಗ ಕಲಾವಿದರಾಗಿ, ಆಕಾಶವಾಣಿ ಕಲಾವಿದರಾ ಗಿ ಹಲವಾರು ನಾಟಕಗಳ ನಿರ್ದೇಶನ, ನಟನೆ ಮಾಡಿದ್ದರು. 1955ರಲ್ಲಿ ಶಿವರಾಮ ಕಾರಂತರ ಅಧ್ಯಕ್ಷತೆಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕಾರಂತರ ನಾಟಕ ಗರ್ಭಗುಡಿಯ ನಿರ್ದೇಶನ ಮಾಡಿ ಕಾರಂತರಿಂದ ಪ್ರಶಂಸೆಗೆ ಪಾತ್ರರಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.