
ರಾಯಚೂರು [ಜು.27]: ಬಿಜೆಪಿ ರಾಜ್ಯದಲ್ಲಿ ಅಧಿಕಾರ ಗದ್ದುಗೆಗೆ ಏರಿದೆ. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಾರೆ. ಇದೇ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಲಾಬಿ ಶುರುವಾಗಿದೆ.
ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಗೆ ಸಚಿವ ಸ್ಥಾನ ನೀಡಬೇಕು ಎಂದು ಬಿಸಿಲು ನಾಡು ರಾಯಚೂರು ಜಿಲ್ಲೆಯ ನಾಯಕರು ಒತ್ತಾಯಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹಿರಿಯೂರು ಕ್ಷೇತ್ರದ ಶಾಸಕಿ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್ ಯಾದವ ಸಮುದಾಯದಿಂದ ಬಂದಿದ್ದು, ಸಮುದಾಯದ ಹಿತದೃಷ್ಟಿಯಿಂದಾಗಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಲಾಗಿದೆ.
ರಾಜ್ಯ ರಾಜಕೀಯದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
ಸಿಎಂ ಯಡಿಯೂರಪ್ಪಗೆ ಸಮುದಾಯದ ಮುಖಂಡರು ಒತ್ತಾಯಿಸಿದ್ದು, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಯಾದವ ಸಮಾಜ ಅತೀ ಹಿಂದುಳಿದಿದೆ. ಸಮಾಜದಿಂದ ಆಯ್ಕೆ ಆಗಿರುವ ಏಕೈಕ ಶಾಸಕಿ ಪೂರ್ಣಿಮಾ ಅವರಿಗೆ ಸಚಿವ ಸ್ಥಾನ ನೀಡಬೇಕು. ಸಚಿವ ಸ್ಥಾನ ನೀಡಿ ಯಾದವ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವಂತೆ ಒತ್ತಾಯಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.