
ಯಾದಗಿರಿ (ಜೂ.20): ಜಿಲ್ಲೆಯ ಸುರಪುರ ತಾಲೂಕಿನ ನಾಗರಾಳ ಗ್ರಾಮದಲ್ಲಿ ಎಲ್‌ಎಲ್‌ಬಿ ಕಾನೂನು ಪದವಿ ವಿದ್ಯಾರ್ಥಿಯೊಬ್ಬನಿಗೆ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿರುವ ಆಘಾತಕಾರಿ ಘಟನೆ ನಡೆದಿದೆ.
ದುರ್ಗಪ್ಪ ಎಂಬ ಕಾನೂನು ವಿದ್ಯಾರ್ಥಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ, ಯಾವುದೇ ಕಾರಣವಿಲ್ಲದೇ ಕೆಲವರು ಅವನನ್ನು ಅಡ್ಡಗಟ್ಟಿ ಜಾತಿ ಆಧಾರಿತ ನಿಂದನೆ ಮಾಡಿದ್ದಾರೆ. ಈ ಘಟನೆಯಲ್ಲಿ ಮಲ್ಲಯ್ಯ ಹುಲಕಲ್ ಮತ್ತು ಅರ್ಜುನಪ್ಪ ದೇವಡಿ ಎಂಬ ಆರೋಪಿಗಳು ದುರ್ಗಪ್ಪನವರನ್ನು ತಡೆದು ಜಾತಿಗೆ ಸಂಬಂಧಿಸಿದ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಜಾತಿ ನಿಂದನೆಯ ಈ ಕೃತ್ಯವು ಸಮಾಜದಲ್ಲಿ ಇನ್ನೂ ಜಾತಿವಾದದ ಆಳವಾದ ಬೇರುಗಳಿರುವುದುಕ್ಕೆ ತಾಜಾ ನಿದರ್ಶನವಾಗಿದೆ.
ದುರ್ಗಪ್ಪನವರು ಈ ಘಟನೆಯ ಬಗ್ಗೆ ಸುರಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಜಾತಿ ನಿಂದನೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈ ಘಟನೆಯಿಂದ ಸ್ಥಳೀಯ ಸಮುದಾಯದಲ್ಲಿ ಆತಂಕ ಮತ್ತು ಕೋಪ ಉಂಟಾಗಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಘಟನೆಯ ವಿರುದ್ಧ ತೀವ್ರ ಖಂಡನೆ ವ್ಯಕ್ತವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.