5 ಜಿಲ್ಲೆಗಳ ಪ್ರವಾಸ ರಾಯಭಾರಿಯಾಗಿ ಯದುವೀರ್

By Web DeskFirst Published Sep 25, 2018, 8:55 AM IST
Highlights

ಮೈಸೂರು ಭಾಗದ ಐದು ಜಿಲ್ಲೆಗಳ ಪ್ರವಾಸೋದ್ಯಮ ಅಭಿವೃದ್ಧಿಗೆ ರಾಯಭಾರಿಯಾಗಿ ಯದುವೀರ್ ಆಯ್ಕೆ | ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಹಾಗೂ ಕೊಡಗು ಜಿಲ್ಲೆಗೆ ಪ್ರವಾಸೋದ್ಯಮ ರಾಯಭಾರಿಯಾದ ಯದುವೀರ್ 

ಬೆಂಗಳೂರು (ಸೆ. 25): ಮೈಸೂರು ಭಾಗದ ಐದು ಜಿಲ್ಲೆಗಳ ಪ್ರವಾಸೋದ್ಯಮ ಅಭಿವೃದ್ಧಿಗೆ ರಾಯಭಾರಿ ಆಗಲು ಮೈಸೂರು ರಾಜ ವಂಶಜಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಒಪ್ಪಿಗೆ ನೀಡಿದ್ದಾರೆ.

ಈ ಬಗ್ಗೆ ಪ್ರವಾಸೋದ್ಯಮ ಹಾಗೂ ರೇಷ್ಮೆ ಇಲಾಖೆ ಸಚಿವ ಸಾ.ರಾ. ಮಹೇಶ್ ಮಾಹಿತಿ ನೀಡಿದ್ದಾರೆ. ‘ಸರ್ಕಾರದ ಪರವಾಗಿ ಐದು ಜಿಲ್ಲೆಗಳ ಪ್ರವಾಸೋದ್ಯಮ ಅಭಿವೃದ್ಧಿಗೆ ರಾಯಭಾರಿ ಆಗುವಂತೆ ಯದುವೀರ್ ಕೃಷ್ಣದತ್ತ ಒಡೆಯರ್ ಅವರಿಗೆ ಮನವಿ ಮಾಡಲಾಗಿತ್ತು.

ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಹಾಗೂ ಕೊಡಗು ಜಿಲ್ಲೆಗೆ ಪ್ರವಾಸೋದ್ಯಮ ರಾಯಭಾರಿ ಆಗಬೇಕು. ಈ ಮೂಲಕ ಮೈಸೂರು ಭಾಗವನ್ನು ದಕ್ಷಿಣ ಭಾರತದ ಪ್ರಮುಖ ಪ್ರವಾಸೋದ್ಯಮ ಕೇಂದ್ರವನ್ನಾಗಿ ಮಾಡುವ ಕಾರ್ಯದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದೆವು. ಇದಕ್ಕೆ ಪೂರಕವಾಗಿ ಸ್ಪಂದಿಸಿ ಒಪ್ಪಿಗೆ ಸೂಚಿಸಿದ್ದಾರೆ’ ಎಂದು ಹೇಳಿದ್ದಾರೆ.

ಯದುವೀರ್ ಅವರಿಗೆ ಪತ್ರ ಬರೆದು ಅಭಿನಂದನೆ ಸಲ್ಲಿಸಿರುವ ಸಚಿವರು, ಪ್ರವಾಸೋದ್ಯಮ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ರಚನಾತ್ಮಕವಾಗಿ ಮುಂದುವರೆಯಲು ಅಗತ್ಯ ಸಲಹೆ-ಮಾರ್ಗದರ್ಶನಗಳನ್ನು ತಾವು ನೀಡಬೇಕು. ತಮಗೆ ಸೂಕ್ತ ಎನಿಸುವ ಸಮಯದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಸಭೆಯನ್ನು ಏರ್ಪಡಿಸಲಾಗುವುದು ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ. 

click me!