
ಮೈಸೂರು (ಮಾ. 29): ರಾಜವಂಶಸ್ಥ ಯದುವೀರ್ ಬಿಜೆಪಿ ಸ್ಟಾರ್ ಕ್ಯಾಂಪೇನಿಯರ್ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಮೈಸೂರು ಭಾಗದಲ್ಲಿ ಬಿಜೆಪಿ ಪರ ಮತ ಯಾಚಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೇಳಲಿದ್ದಾರೆ. ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪರ ಪ್ರಚಾರ ಮಾಡುವಂತೆ ಮನವಿ ಮಾಡಲಿದ್ದಾರೆ. ಮಾರ್ಚ್ 30 ರಂದು ಅರಮನೆಗೆ ಭೇಟಿ ನೀಡುವ ವೇಳೆ ಯದುವೀರ್ ಜೊತೆ ಅಮಿತ್ ಶಾ ಮಾತುಕತೆ ನಡೆಸಲಿದ್ದಾರೆ. ಈಗಾಗಲೇ ಯದುವೀರ್’ನನ್ನು ಪಕ್ಷಕ್ಕೆ ಕರೆತರುವ ಪ್ರಯತ್ನಗಳೂ ನಡೆದಿವೆ. ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಮನಸ್ಸು ಮಾಡದ ಹಿನ್ನೆಲೆಯಲ್ಲಿ ಬಿಜೆಪಿ ಹೊಸ ತಂತ್ರ ಹೆಣೆದಿದೆ.
ಮೈಸೂರೂ ಭಾಗದಲ್ಲಿಯೇ ಸಿದ್ದರಾಮಯ್ಯರನ್ನು ಕಟ್ಟಿ ಹಾಕಲು ಬಿಜೆಪಿ ಚಾಣಕ್ಯ ಅಮಿತ್ ಶಾ ಹೊಸ ತಂತ್ರ ಹೆಣೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.