ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದ್ರೆ ಹುಷಾರ್!: ಪೊಲೀಸರಿಗೆ ಆವಾಜ್ ಹಾಕಿದ ಯಡಿಯೂರಪ್ಪ

Published : Jun 16, 2017, 08:39 AM ISTUpdated : Apr 11, 2018, 01:13 PM IST
ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದ್ರೆ ಹುಷಾರ್!: ಪೊಲೀಸರಿಗೆ ಆವಾಜ್ ಹಾಕಿದ ಯಡಿಯೂರಪ್ಪ

ಸಾರಾಂಶ

ವಿಧಾನಸಭೆ ಚುನಾವಣೆ ನಡೆಯಲು ಸುಮಾರು 1 ವರ್ಷ ಇದೆ. ಅಷ್ಟರಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡ್ಡಿಯೂರಪ್ಪ, ಮುಂದಿನ ವರ್ಷ ನಾವೇ ಅಧಿಕಾರಕ್ಕೆ ಬರುತ್ತೇವೆ. ಆ ವೇಳೆ ನಿಮ್ಮನ್ನು ನೋಡಿಕೊಳ್ಳುತ್ತೇವೆ ಅಂತ ಪೊಲೀಸರಿಗೆ ಆವಾಜ್ ಹಾಕಿದ್ದಾರೆ. ಹೌದು, ನಿನ್ನೆ  ಶ್ರೀರಂಗಪಟ್ಟಣದಲ್ಲಿ  ನಡೆದ ಜನ ಸಂಪರ್ಕ ಅಭಿಯಾನ ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳನ್ನ ತರಾಟೆ ತೆಗೆದುಕೊಂಡಿದ್ದಾರೆ. ಅಷ್ಟೇ ಅಲ್ಲ ನಾನು ಸಿಎಂ ಆದ ಮೇಲೆ ನಿಮ್ಮನ್ನ ನೋಡಿಕೊಳ್ಳುತ್ತೇವೆ ಅಂತಾ ಪೊಲೀಸರಿಗೆ ಅವಾಜ್ ಹಾಕಿದ್ದಾರೆ.

ಮಂಡ್ಯ(ಜೂ.16): ವಿಧಾನಸಭೆ ಚುನಾವಣೆ ನಡೆಯಲು ಸುಮಾರು 1 ವರ್ಷ ಇದೆ. ಅಷ್ಟರಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡ್ಡಿಯೂರಪ್ಪ, ಮುಂದಿನ ವರ್ಷ ನಾವೇ ಅಧಿಕಾರಕ್ಕೆ ಬರುತ್ತೇವೆ. ಆ ವೇಳೆ ನಿಮ್ಮನ್ನು ನೋಡಿಕೊಳ್ಳುತ್ತೇವೆ ಅಂತ ಪೊಲೀಸರಿಗೆ ಆವಾಜ್ ಹಾಕಿದ್ದಾರೆ. ಹೌದು, ನಿನ್ನೆ  ಶ್ರೀರಂಗಪಟ್ಟಣದಲ್ಲಿ  ನಡೆದ ಜನ ಸಂಪರ್ಕ ಅಭಿಯಾನ ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳನ್ನ ತರಾಟೆ ತೆಗೆದುಕೊಂಡಿದ್ದಾರೆ. ಅಷ್ಟೇ ಅಲ್ಲ ನಾನು ಸಿಎಂ ಆದ ಮೇಲೆ ನಿಮ್ಮನ್ನ ನೋಡಿಕೊಳ್ಳುತ್ತೇವೆ ಅಂತಾ ಪೊಲೀಸರಿಗೆ ಅವಾಜ್ ಹಾಕಿದ್ದಾರೆ.

ಪೊಲೀಸ್ ಅಧಿಕಾರಿಗಳು ಬಿಜೆಪಿ ಕಾರ್ಯಕ್ರಮಗಳಿಗೆ ಸ್ಥಳಾವಕಾಶ ನೀಡುತ್ತಿಲ್ಲ, ಬಿಜೆಪಿ ಮುಖಂಡರಿಗೆ ಕಿರುಕುಳ ನೀಡುತ್ತಿದ್ದಾರೆ. ಈ ರೀತಿ ನಡೆದುಕೊಂಡರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಅಂತಹ ಅಧಿಕಾರಿಗಳಿಗೆ ಸೂಕ್ತ ಜಾಗ ತೋರಿಸಬೇಕಾಗುತ್ತವೆ. ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿರುವ ಪೊಲೀಸರ ಪಟ್ಟಿ ಮಾಡುತ್ತಿದ್ದೇವೆ. ಕಾಲ ಬಂದಾಗ ತಕ್ಕ ಪಾಠ ಕಲಿಸುತ್ತೇವೆ ಎಂದು  ಪೊಲೀಸರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಒಟ್ಟಿನಲ್ಲಿ, ಮುಂದಿನ ಚುನಾವಣೆ ಗೆಲ್ಲುವ ಹುಮ್ಮಸ್ಸಿನಲ್ಲಿರುವ ಯಡಿಯೂರಪ್ಪ, ಪೊಲೀಸರ ವಿರುದ್ಧ ಈ ರೀತಿ ವಾಗ್ದಾಳಿ ನಡೆಸಿರೋದು ಎಷ್ಟು ಸರಿ ಅನ್ನೋ ಮಾತು ಕೇಳಿಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು ಕೇಂದ್ರದಲ್ಲಿ ಏರ್‌ಟ್ಯಾಕ್ಸಿ ಪರೀಕ್ಷೆ ಆರಂಭಿಸಿದ ಸರ್ಲಾ ಏವಿಯೇಷನ್‌, 2028ಕ್ಕೆ ಲಾಂಚ್‌
ದುಬೈ ಮರುಭೂಮಿಯಲ್ಲಿ ನಿಗೂಢ ಜೀವಿ ಪತ್ತೆ: ಪ್ರವಾಸಿ ಮಹಿಳೆ ಹಂಚಿಕೊಂಡ ವಿಡಿಯೋ ಭಾರೀ ವೈರಲ್!