ಯಕ್ಷಗಾನದ ಮೇರು ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗಡೆ ಇನ್ನಿಲ್ಲ

Published : Oct 03, 2017, 10:33 PM ISTUpdated : Apr 11, 2018, 01:01 PM IST
ಯಕ್ಷಗಾನದ ಮೇರು ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗಡೆ ಇನ್ನಿಲ್ಲ

ಸಾರಾಂಶ

ಯಕ್ಷಗಾನ ಮೇರು ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗಡೆ ನಿಧನ ಹೊಂದಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಮಣಿಪಾಲ ಆಸ್ಪತ್ರೆಯಲ್ಲಿ ಚಿಟ್ಟಾಣಿ ರಾಮಚಂದ್ರ ಹೆಗಡೆ ನಿಧನ ಹೊಂದಿದ್ದಾರೆ.

ಬೆಂಗಳೂರು (ಅ.03): ಯಕ್ಷಗಾನ ಮೇರು ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗಡೆ ನಿಧನ ಹೊಂದಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಮಣಿಪಾಲ ಆಸ್ಪತ್ರೆಯಲ್ಲಿ ಚಿಟ್ಟಾಣಿ ರಾಮಚಂದ್ರ ಹೆಗಡೆ ನಿಧನ ಹೊಂದಿದ್ದಾರೆ.

ಯಕ್ಷಗಾನ ಕ್ಷೇತ್ರದಲ್ಲಿ ಭಾರೀ ಹೆಸರು ಮಾಡಿದ್ದರು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾಗಿದ್ದರು.

ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ಮೂಲದ ಚಿಟ್ಟಾಣಿ ರಾಮಚಂದ್ರ ಹೆಗಡೆ ಜನವರಿ 1, 1933ರಲ್ಲಿ ಜನಿಸಿದರು. ತಮ್ಮ 7ನೇ ವರ್ಷದಲ್ಲಿಯೇ ಯಕ್ಷಗಾನದಲ್ಲಿ ನಟಿಸಲು ಆರಂಭ ಮಾಡಿದರು.  ಎರಡನೇ ತರಗತಿ ವಿದ್ಯಾರ್ಥಿಯಾಗಿದ್ದಾಗಲೇ ಶಾಲೆಬಿಟ್ಟ ರಾಮಚಂದ್ರ ಹೆಗಡೆ  ಕೇವಲ 14ನೇ ವರ್ಷಕ್ಕೇ ಪ್ರಮುಖ ಪಾತ್ರಗಳನ್ನ ನಿರ್ವಹಿಸುತ್ತಿದ್ದರು.

ಯಕ್ಷಗಾನದ ಬಡಗುತಿಟ್ಟು ಶೈಲಿಯ ಮೇರು ಕಲಾವಿದರು ಇವರು. ಕೌರವ, ದುಷ್ಟಬುದ್ದಿ, ಭಸ್ಮಾಸುರ, ಕೀಚಕ, ಮಾಗದ, ಕರ್ಣ, ರುದ್ರಕೋಪ, ಕಂಸನ ಪಾತ್ರಗಳಲ್ಲಿ ಇವರ ನಟನೆ ಹೆಸರು ಮಾಡಿತ್ತು.

‘ಚಿಟ್ಟಾಣಿ ಘರಾಣಾ’ ಎಂದೇ ರಾಮಚಂದ್ರ ಹೆಗಡೆ ಶೈಲಿ ಹೆಸರುವಾಸಿಯಾಗಿತ್ತು. ಪದ್ಮಶ್ರೀ ಪುರಸ್ಕಾರಕ್ಕೆ ಪಾತ್ರರಾದ ಮೊದಲ ಯಕ್ಷಗಾನ ಕಲಾವಿದ ಇವರು.  ವಿದೇಶಗಳಲ್ಲೂ ಯಕ್ಷಗಾನ ಪ್ರದರ್ಶನ ನೀಡಿದ್ದಾರೆ.  ಬಡಗುತಿಟ್ಟು ಶೈಲಿಯಲ್ಲಿ ನವರಸಗಳನ್ನೂ ಹೊರಹೊಮ್ಮಿಸುತ್ತಿದ್ದರು. ಓರ್ವ ಪತ್ನಿ, ಮೂವರು ಮಕ್ಕಳನ್ನು ಅಗಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರ್ನಾಟಕದ ನೆಲದಲ್ಲಿ ಕೋಟಿ ಕೋಟಿ ಸಂಪತ್ತು? ಯಾವ ಜಿಲ್ಲೆಗಳಲ್ಲಿದೆ ಚಿನ್ನ, ವಜ್ರದ ನಿಕ್ಷೇಪ?
'ನೀವು ಎಂಎಲ್ಸಿ ಅನ್ನೋಕೆ ಸಾಕ್ಷಿ ಏನು?' Keshav Prasad ಕಾರು ತಡೆದ ಟೋಲ್ ಸಿಬ್ಬಂದಿ, ಒಂದು ಗಂಟೆ ಕಾಲ ಕಿರಿಕ್!