ರಾಜಧಾನಿಯಲ್ಲಿ ಹೈ ಅಲರ್ಟ್ : ತಗ್ಗು ಪ್ರದೇಶದ ಜನರ ಸ್ಥಳಾಂತರ

First Published Jul 30, 2018, 12:54 PM IST
Highlights

ರಾಜಧಾನಿಯಲ್ಲಿ ಇದೀಗ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ನದಿಯು ಅಪಾಯದ ಮಟ್ಟ ಮೀರಿದ್ದು ತಗ್ಗು  ಪ್ರದೇಶದ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡುವ ಕಾರ್ಯ ನಡೆಯುತ್ತಿದೆ. 

ನವದೆಹಲಿ: ಯುಮುನಾ ನದಿ ದೆಹಲಿಯಲ್ಲಿ ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. 

ಭಾನುವಾರ ಸಂಜೆ 5 ಗಂಟೆ ವೇಳೆಗೆ ನದಿ 205.30 ಅಡಿ ತಲುಪಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಿರಿಯ ಅಧಿಕಾರಿಗಳ ತುರ್ತು ಸಭೆ ನಡೆಸಿ, ಕೈಗೊಳ್ಳಬೇಕಾದ ತುರ್ತುಕ್ರಮಗಳ ಕುರಿತು ಚರ್ಚೆ ನಡೆಸಿದ್ದಾರೆ. 

ಜೊತೆಗೆ ನಗರದ ತಗ್ಗುಪ್ರದೇಶಗಳ ಸಾವಿರಾರು ಜನರನ್ನು ಈಗಾಗಲೇ ಸುರಕ್ಷಿತ ಸ್ಥಳಕ್ಕೆ ರವಾನಿಸುವ ಕೆಲಸ ಆರಂಭವಾಗಿದ್ದು, ಸೋಮವಾರ ಸರ್ಕಾರ ಇನ್ನಷ್ಟು ಪರಿಹಾರ ಕ್ರಮಗಳನ್ನು ಪ್ರಕಟಿಸಲಿದೆ ಎನ್ನಲಾಗಿದೆ.

click me!