
ಹೈದರಾಬಾದ್(ಡಿ.19): ಹೈದರಾಬಾದ್`ನ ಅವಳಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರ ಯಾಸಿನ್ ಭಟ್ಕಳ್ ಮತ್ತು ಆತನ ನಾಲ್ವರು ಸಹಚರರಿಗೆ ಗಲ್ಲು ಶಿಕ್ಷೆ ವಿಧಿಸಿ ಎನ್`ಐಎ ಕೋರ್ಟ್ ತೀರ್ಪು ನೀಡಿದೆ. ಅಸಾದುಲ್ಲಾ ಅಕ್ತರ್, ವಕಾಸ್, ಮೋನು, ಅಸಾದುಲ್ಲಾ ಅಕ್ತರ್ ಅಲಿಯಾಸ್ ಹಡ್ಡಿ, ಜಿಯಾ ಉರ್ ರೆಹಮಾನ್ ಅಲಿಯಾಸ್ ವಖಾಸ್, ತಹಸೀನ್ ಅಖ್ತರ್, ಅಜೀಜ್ ಶೇಕ್, ಯಾಸಿನ್ ಭಟ್ಕಳ್`ಗೆ ಮರಣ ದಂಡನೆ ವಿಧಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ, ಇಂಡಿಯನ್ ಮುಜಾಹಿದ್ದೀನ್ ಸಂಸ್ಥಾಪಕ ರಿಯಾಜ್ ಭಟ್ಕಳ್ ತಲೆಮರೆಸಿಕೊಂಡಿದ್ದಾನೆ.
2013ರ ಫೆಬ್ರವರಿ 21ರಂದು ದಿಲ್`ಸುಖ್ ನಗರದಲ್ಲಿ ಅವಳಿ ಬಾಂಬ್ ಸ್ಫೋಟ ನಡೆಸಿದ್ದರು.ಬಾಂಬ್ ಸ್ಫೋಟದಲ್ಲಿ 18 ಮಂದಿ ಮೃತಪಟ್ಟು, 119 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ 157 ಮಂದಿಯಿಂದ ಸಾಕ್ಷಿ ಪಡೆದಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.