
ಬೆಂಗಳೂರು, [ಆ.06]: ಇದೇ ಆಗಸ್ಟ್ 9 ಅಥವಾ 10ಕ್ಕೆ ರಾಜ್ಯ ಬಿಜೆಪಿ ಸರ್ಕಾರದ ಸಚಿವ ಸಂಪುಟ ರಚನೆಯಾಗಲಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಸಂಪುಟ ರಚನೆ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದು [ಮಂಗಳವಾರ] ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಚರ್ಚೆ ಮಾಡಿದ್ದಾರೆ. ಆದ್ರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಬ್ಯುಸಿಯಾಗಿರುವುದರಿಂದ ಬಿಎಸ್ ವೈ, ಶಾರನ್ನು ಭೇಟಿ ಮಾಡಲು ಆಗಿಲ್ಲ.
BSY ಸಚಿವ ಸಂಪುಟ ವಿಸ್ತರಣೆಗೆ ವಿಳಂಬ ಏಕೆ?: ಕಾರಣ ಕೊಟ್ಟ ಬಿಜೆಪಿ ಶಾಸಕ
ಆಗಸ್ಟ್ 9 ಶುಕ್ರವಾರ ವರಮಹಾಲಕ್ಷ್ಮಿ ಹಬ್ಬ ಇರುವ ಕಾರಣ ಅಂದೇ ನೂತನ ಸಚಿವ ಸಂಪುಟ ರಚನೆ ಮಾಡಬೇಕೆನ್ನುವುದು ಯಡಿಯೂರಪ್ಪನವರ ಅಭಿಲಾಷೆಯಾಗಿದೆಯಂತೆ. ಎಲ್ಲವೂ ಅಂದುಕೊಂಡಂತೆ ಆದರೆ, ಆ.9ಕ್ಕೆ ಬಿಎಸ್ ವೈ ನೇತೃತ್ವದಲ್ಲಿ ಸಚಿವ ಸಂಪುಟ ರಚನೆಯಾಗುವ ಸಾಧ್ಯತೆಗಳು ಹೆಚ್ಚಿವೆ.
ಇನ್ನು ಮೊದಲ ಹಂತದಲ್ಲಿ ಯಾರೆಲ್ಲ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನುವ ಕುತೂಹಲ ಮೂಡಿಸಿದ್ದು, 'ಎ' ಗ್ರೇಡ್ ದರ್ಜೆಯ ಶಾಸಕರು ಮೊದಲ ಹಂತದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನವ ಮಾಹಿತಿ ಲಭ್ಯವಾಗಿದೆ.
ಮೋದಿ ಹಾದಿಯಲ್ಲಿ BSY, ಸಂಪುಟ ರಚನೆಗೆ ಪಂಚಸೂತ್ರ! ಯಾರಿಗೆ ಚಾನ್ಸ್?
ಬೆಂಗಳೂರಿನಿಂದ 4 ಶಾಸಕರು ಅಂದರೆ, ಆರ್ ಅಶೋಕ್, ಸುರೇಶ್ ಕುಮಾರ್, ಅರವಿಂದ್ ಲಿಂಬಾವಳಿ, ಡಾ. ಅಶ್ವತ್ ನಾರಾಯಣ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.
ಇವರ ಜತೆಗೆ ಕೆ.ಎಸ್. ಈಶ್ವರಪ್ಪ,ಜಗದೀಶ್ ಶೆಟ್ಟರ್, ಮಾಧುಸ್ವಾಮಿ, ಶ್ರೀರಾಮಲು, ಪ್ರಭು ಚೌಹಾಣ್, ಗೋವಿಂದ್ ಕಾರಜೋಳ, ಸಿಟಿ ರವಿ, ಕೆಜಿ ಬೋಪಯ್ಯ, ಅಂಗಾರ, ಬಸವರಾಜ್ ಪಾಟೀಲ್ ಯತ್ನಾಳ್ ಇವರೆಲ್ಲರೂ ಮೊದಲ ಹಂತದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳು ಹೆಚ್ಚಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.