ರಾಜ್ಯದ 21 ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ , Yellow Alert!

By Kannadaprabha NewsFirst Published Sep 24, 2019, 9:59 AM IST
Highlights

ರಾಜ್ಯದ ಎಲ್ಲೆಡೆ ಸುರಿದ ಮಳೆಯಿಂದ ಅಸ್ತವ್ಯಸ್ತವಾದ ಜನಜೀವನ ಇನ್ನೂ ಸುಧಾರಿಸಿಲ್ಲ. ಉತ್ತರ ಕರ್ನಾಟಕದ ಮಂದಿ ಮನೆಯನ್ನು ಕಳೆದುಕೊಂಡು ಅಕ್ಷರಶಃ ಬೀದಿಗೆ ಬಂದಿದ್ದಾರೆ. ಇಂಥ ಸಂದರ್ಭದಲ್ಲಿಯೇ ಮತ್ತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ವರುಣ ದೇವನೇ ಕಾಪಾಡಬೇಕು!

 ಬೆಂಗಳೂರು (ಸೆ.24): ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಮುಂದಿನ 48 ಗಂಟೆಗಳಲ್ಲಿ ರಾಜ್ಯದ 21 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಸೆ.27 ವರೆಗೆ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಆಂಧ್ರಪ್ರದೇಶದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪರಿಣಾಮ ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಮುಂಗಾರು ಚುರುಕುಕೊಂಡಿದೆ. ಉತ್ತರ ಒಳನಾಡಿನ ಒಂಬತ್ತು ಹಾಗೂ ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗದ 11 ಜಿಲ್ಲೆಗಳು ಸೇರಿದಂತೆ ಒಟ್ಟು 21 ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ 65 ಮಿ.ಮೀ.ನಿಂದ 115 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಹಾಗಾಗಿ, ಈ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ‘ #YellowAlert ನೀಡಿದೆ.

ಎಂಥ ಸೌಂದರ್ಯ ನೋಡು, ನಮ್ಮ ಕರುನಾಡ ಬೀಡು

ಉಳಿದಂತೆ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಎರಡು ದಿನದ ಬಳಿಕ ಮುಂಗಾರು ಚುರುಕುಗೊಂಡು ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಒಟ್ಟಾರೆ ರಾಜ್ಯದಲ್ಲಿ ಸೆ. 27ರವರೆಗೆ ಉತ್ತಮ ಮಳೆಯಾಗಲಿದೆ. ಅಲ್ಲಲ್ಲಿ ಭಾರೀ ಮಳೆ ಆಗುವ ಸಾಧ್ಯತೆಯೂ ಇದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಶ್ರೀನಿವಾಸ್‌ ರೆಡ್ಡಿ ‘ಕನ್ನಡಪ್ರಭ’ಕ್ಕೆ ಮಾಹಿತಿ ನೀಡಿದ್ದಾರೆ.

ಅರಬ್ಬಿ ಸಮುದ್ರದ ಉತ್ತರ ಭಾಗದಲ್ಲಿ ರೂಪುಗೊಂಡಿರುವ ‘ಹಿಕ್ಕಾ’ ಚಂಡಮಾರುತದಿಂದ ಕರ್ನಾಟಕದ ಮೇಲೆ ಯಾವುದೇ ಪರಿಣಾಮ ಉಂಟಾಗುವುದಿಲ್ಲ ಎಂದೂ ಅವರು ತಿಳಿಸಿದ್ದಾರೆ.

ಮಳೆಗೆ ಸಂಬಂಧಸಿದ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

click me!