ನಮ್ಮ ತಪ್ಪುಗಳನ್ನು ಅವಲೋಕಿಸುತ್ತೇವೆ: ಕೇಜ್ರಿವಾಲ್

Published : Apr 29, 2017, 07:53 AM ISTUpdated : Apr 11, 2018, 01:01 PM IST
ನಮ್ಮ ತಪ್ಪುಗಳನ್ನು ಅವಲೋಕಿಸುತ್ತೇವೆ: ಕೇಜ್ರಿವಾಲ್

ಸಾರಾಂಶ

ಎಂಸಿಡಿ ಚುನಾವಣೆಯಲ್ಲಿ ಭಾರೀ ಅಂತರದಲ್ಲಿ ಸೋಲನ್ನು ಕಂಡ ಆಮ್ ಆದ್ಮಿ ಪಕ್ಷ ಸೋಲನ್ನು ಒಪ್ಪಿಕೊಂಡಿದೆ. ಪಕ್ಷದ ಸಂಚಾಲಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೋಲಿನ ಪರಾಮರ್ಶೆ ಮಾಡಿಕೊಳ್ಳುತ್ತೇವೆ ಎಂದಿದ್ದಾರೆ. 

ನವದೆಹಲಿ (ಏ.29): ಎಂಸಿಡಿ ಚುನಾವಣೆಯಲ್ಲಿ ಭಾರೀ ಅಂತರದಲ್ಲಿ ಸೋಲನ್ನು ಕಂಡ ಆಮ್ ಆದ್ಮಿ ಪಕ್ಷ ಸೋಲನ್ನು ಒಪ್ಪಿಕೊಂಡಿದೆ. ಪಕ್ಷದ ಸಂಚಾಲಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೋಲಿನ ಪರಾಮರ್ಶೆ ಮಾಡಿಕೊಳ್ಳುತ್ತೇವೆ ಎಂದಿದ್ದಾರೆ. 

ನಾವು ತಪ್ಪನ್ನು ಮಾಡಿದ್ದೇವೆ. ಅದನ್ನು ನಾವು ಪರಾಮರ್ಶಿಸುತ್ತೇವೆ. ಮತದಾರರಿಗೆ ಹಾಗೂ ಕಾರ್ಯಕರ್ತರಿಗೆ ನಾವು ಬದ್ಧರಾಗಿರುತ್ತೇವೆ. ನಮ್ಮ ತಪ್ಪುಗಳನ್ನು ತಿದ್ದಿಕೊಳ್ಳುವ ಅಗತ್ಯವಿದೆ ಎಂದು ಕೇಜ್ರಿವಾಲ್ ಹೇಳಿದರು.

ಪಕ್ಷದ ಸೋಲಿಗೆ ಎಂದಿನಂತೆ ಇವಿಎಂ, ಪ್ರತಿಪಕ್ಷಗಳು ಪಿತೂರಿ ನಡೆಸಿದ್ದಾರೆ ಎಂದು ಯಾರನ್ನೂ ದೂರದೇ ತಮ್ಮ ತಪ್ಪುಗಳನ್ನು ಒಪ್ಪಿಕೊಂಡಿದ್ದಾರೆ.

ಗೋವಾ, ಪಂಜಾಬ್ ಹಾಗೂ ದೆಹಲಿಯಲ್ಲಿ ಆಪ್ ಸತತ ಸೋಲನುಭವಿಸಿದ ನಂತರ ಪಕ್ಷದ ಸದಸ್ಯರು, ರಾಜಕೀಯ ಪಂಡಿತರು ಸೋಲಿಗೆ ಕೇಜ್ರಿವಾಲೇ ಕಾರಣ ಎಂದು ದೂಷಿಸಿದ್ದರು.  

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವೀಕ್ ಡೇಸಲ್ಲಿ ಫ್ರೊಫೆಸರ್, ವೀಕೆಂಡ್‌ನಲ್ಲಿ ಖತರ್ನಾಕ್ ಕಳ್ಳಿ! ಮದುವೆ ಮನೆಗಳಲ್ಲಿ ಕನ್ನ ಹಾಕುತ್ತಿದ್ದ ಶಿಕ್ಷಕಿ!
2026 Holiday Calendar:ಮುಂದಿನ ವರ್ಷ ಕುಟುಂಬದ ಜೊತೆ ಟ್ರಿಪ್ ಹೋಗೋಕೆ ಇಲ್ಲಿದೆ ಬೆಸ್ಟ್ ಲೀವ್ ಪ್ಲಾನ್!