
ಲಖನೌ : ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯ ನಾಥ್ ತಮ್ಮ ಸಂಪುಟ ಸಭೆ ಸೇರಿದಂತೆ ಎಲ್ಲಾ ರೀತಿಯ ಸರ್ಕಾರಿ ಸಭೆಗಳಲ್ಲಿ ಮೊಬೈಲ್ ಬಳಕೆಗೆ ನಿಷೇಧ ಹೇರಿದ್ದಾರೆ.
ಸಚಿವರು ಮತ್ತು ಅಧಿಕಾರಿಗಳು ಮಹತ್ವದ ವಿಚಾರಗಳ ಚರ್ಚೆ ವೇಳೆಯೂ ಮೊಬೈಲ್‌ನಲ್ಲೇ ಕಾಲ ಕಳೆಯುತ್ತಾರೆ. ಚರ್ಚೆಯ ವಿಷಯಕ್ಕೆ ಮೊಬೈಲ್ ಬಳಕೆಯಿಂದಾಗಿ ಆದ್ಯತೆ ಸಿಗುತ್ತಿಲ್ಲ.
ಈ ಹಿನ್ನೆಲೆಯಲ್ಲಿ ಸಿಎಂ ಯೋಗಿ ಈ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ. ಇದಕ್ಕೂ ಮುನ್ನ ಸಚಿವರಿಗೆ ಸೈಲೆಂಟ್ ಮೋಡ್‌ನಲ್ಲಿ ಇರಿಸಿಕೊಳ್ಳುವಂತೆ ಸೂಚಿಸಲಾಗಿತ್ತು. ಆದರೆ ಯಶಸ್ವಿ ಆಗದ ಹಿನ್ನೆಲೆ ಯಲ್ಲಿ ಮೊಬೈಲ್‌ಗೆ ನಿಷೇಧ ಹೇರಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.