
ಗೋರಖ್'ಪುರ(ಅ.02): ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ದಸರಾ ನಿಮಿತ್ತ 5 ದಿನಗಳ ಕಾಲ ಗೋರಖ್‌ನಾಥ ದೇವಾಲಯದಲ್ಲಿ ವಾಸ್ತವ್ಯ ಹೂಡಿದ್ದಾರೆ. ಯೋಗಿ ಅದಿತ್ಯನಾಥ್ ಅವರು ಗೋರಖ್'ನಾಥ್ ದೇವಾಲಯದ ಮುಖ್ಯರ್ಚಕರೂ ಆಗಿದ್ದು, ತೆರೆದ ಜೀಪಿನಲ್ಲಿ ಮೆರವಣಿಗೆ ಮೂಲಕ ರಾಮಲೀಲಾ ಮೈದಾನಕ್ಕೆ ಆಗಮಿಸಿ ದಸರಾ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.
ಕಳೆದ ವರ್ಷದಂತೆ ಈ ಬಾರಿಯೂ ಅವರು ದೇವಾಲಯಕ್ಕೆ ಕಾವಿ ಬಟ್ಟೆಯಲ್ಲಿ ಆಗಮಿಸಿ ಪೂಜೆ ಕೈಗೊಂಡಿದ್ದಾರೆ. ಇದೇ ವೇಳೆ, ಯೋಗಿ ಆದಿತ್ಯನಾಥ್ ಅವರು ಮುಖ್ಯಮಂತ್ರಿಯ ಕರ್ತವ್ಯ ಮತ್ತು ದೇವಾಲಯದ ಧಾರ್ಮಿಕ ಕಾರ್ಯವನ್ನು ಏಕ ಕಾಲದಲ್ಲಿ ಕೈಗೊಂಡಿರುವುದಕ್ಕೆ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ. ಧಾರ್ಮಿಕ ಆಚರಣೆಯಲ್ಲಿ ಪಾಲ್ಗೊಂಡ ವೇಳೆ ಮುಖ್ಯಮಂತ್ರಿಯ ಜವಾಬ್ದಾರಿಯನ್ನು ಇನ್ನೊಬ್ಬರಿಗೆ ವಹಿಸಬೇಕು ಎಂದು ವಿಪಕ್ಷಗಳು ಆಗ್ರಹಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.