ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ

By Suvarna Web DeskFirst Published Mar 19, 2017, 5:44 AM IST
Highlights

ಆದಿತ್ಯನಾಥ್ ಜತೆಗೆ, ಬಿಜೆಪಿ ರಾಜ್ಯಾಧ್ಯಕ್ಷ ಕೇಶವ್ ಪ್ರಸಾದ್ ಮೌರ್ಯ, ಹಾಗೂ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ದಿನೇಶ್ ಶರ್ಮಾ ಉಪ-ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 43 ಮಂದಿ ಸಚಿವರು ಕೂಡಾ ಈ ಸಂದರ್ಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಲಕ್ನೋ (ಮಾ.19): ಉತ್ತರ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಇಲ್ಲಿನ ಸ್ಮೃತಿ ಉಪವನ ನಡೆದ ಸಮಾರಂಭದಲ್ಲಿ ರಾಜ್ಯಪಾಲ ರಾಮ್ ನಾಯಕ್ ಯೋಗಿ ಆದಿತ್ಯನಾಥ್'ಗೆ ಪ್ರಮಾಣ ವಚನ ಬೋಧಿಸಿದ್ದಾರೆ.

ಆದಿತ್ಯನಾಥ್ ಜತೆಗೆ, ಬಿಜೆಪಿ ರಾಜ್ಯಾಧ್ಯಕ್ಷ ಕೇಶವ್ ಪ್ರಸಾದ್ ಮೌರ್ಯ, ಹಾಗೂ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ದಿನೇಶ್ ಶರ್ಮಾ ಉಪ-ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 43 ಮಂದಿ ಸಚಿವರು ಕೂಡಾ ಈ ಸಂದರ್ಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Latest Videos

ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಉಮಾ ಭಾರತಿ ಹಾಗೂ ನಿತೀನ್ ಗಡ್ಕರಿ ಮೊದಲಾದವರು ಭಾಗವಹಿಸಿದ್ದರು.

ಬಿಜೆಪಿ ಮುಖ್ಯಮಂತ್ರಿಗಳ ಪೈಕಿ ಮಹಾರಾಷ್ಟ್ರದ ದೇವೇಂದ್ರ ಫಡ್ನವಿಸ್, ಗೋವಾದ ಮನೋಹರ್ ಪರ್ರಿಕರ್, ಛತ್ತೀಸ್'ಗಡದ ರಮಣ್ ಸಿಂಗ್, ಮಧ್ಯಪ್ರದೇಶದ ಶಿವರಜ್ ಸಿಂಗ್ ಚೌಹಾಣ್ ಹಾಗೂ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಭಾಗವಹಿಸಿದ್ದರು.

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ ಕೂಡಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

click me!