
ಲಕ್ನೋ(ಏ. 23): ಸರಕಾರಿ ಕಚೇರಿಯಲ್ಲಿ ಸರಿಯಾಗಿ ಹಾಜರಾತಿ ಇರುವುದಿಲ್ಲ ಎಂಬ ಆರೋಪ ಸರ್ವೇಸಾಮಾನ್ಯ. ಈ ನಿಟ್ಟಿನಲ್ಲಿ ಸರಕಾರಿ ಆಡಳಿತಕ್ಕೆ ಚುರುಕು ಮುಟ್ಟಿಸಲು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸರಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದ್ದಾರೆ. ಬ್ಲಾಕ್ ಮಟ್ಟದ ಎಲ್ಲಾ ಸರಕಾರೀ ಕಚೇರಿಯಲ್ಲಿ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಅಳವಡಿಸುವಂತೆ ಯೋಗಿ ಸೂಚನೆ ಹೊರಡಿಸಿದ್ದಾರೆ. ಎಲ್ಲಾ ಸರಕಾರಿ ನೌಕರರು ತಪ್ಪದೇ ಬಯೋಮೆಟ್ರಿಕ್ ಬಳಸಬೇಕಾಗುತ್ತದೆ.
ಗ್ರಾಮೀಣ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ನಿನ್ನೆ ರಾತ್ರಿ ನಡೆದ ಸಭೆಯಲ್ಲಿ ಆದಿತ್ಯನಾಥ್ ಈ ಸೂಚನೆಯನ್ನು ಹೊರಡಿಸಿದ್ಧಾರೆ. ಇದೇ ವೇಳೆ, ಪ್ರತಿಯೊಂದು ಗ್ರಾಮಪಂಚಾಯಿತಿಯಲ್ಲೂ ಪಂ. ಅಧ್ಯಕ್ಷನ ಸಂಪರ್ಕ ವಿವರ ಹಾಗೂ ಚಾಲನೆಯಲ್ಲಿರುವ ಕಾಮಗಾರಿಗಳ ವಿವರಗಳನ್ನು ತೋರಿಸುವ ಬೋರ್ಡ್'ವೊಂದನ್ನು ಹಾಕಬೇಕು ಎಂದೂ ಯೋಗಿ ಆದೇಶ ಹೊರಡಿಸಿದ್ದಾರೆ.
ಪ್ರಧಾನಮಂತ್ರಿ ಆವಾಸ್ ಯೋಜನೆ(ವಸತಿ ಯೋಜನೆ), ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ, ಕುಡಿಯುವ ನೀರಿನ ಯೋಜನೆ, ನೀರ್ ನಿರ್ಮಲ್, ಗ್ರಾಮೀಣ ಪೇಜಲ್ ಯೋಜನೆ ಇತ್ಯಾದಿ ವಿವಿಧ ಯೋಜನೆಗಳಿಗೆ ಯೋಗಿ ಇನ್ನಷ್ಟು ಚುರುಕು ಮುಟ್ಟಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.