
ನವದೆಹಲಿ (ಮಾ.21): ಉತ್ತರ ಪ್ರದೇಶ ನೂತನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾರನ್ನು ಭೇಟಿಯಾಗಿ ಪ್ರಮುಖ ವಿಚಾರಗಳನ್ನು ಚರ್ಚಿಸಿದ್ದಾರೆ.
ಅಮಿತ್ ಶಾ ನಿವಾಸದಲ್ಲಿ ಭೇಟಿಯಾದ ನಾಯಕರು ಅಯೋಧ್ಯೆ ರಾಮ ಜನ್ಮಭೂಮಿ- ಬಾಬ್ರಿ ಮಸೀದಿ ವಿವಾದ, ಮುಂದಿನ ರೂಪುರೇಷೆಗಳು, ಹಾಗೂ ಇನ್ನಿತರ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ದೆಹಲಿಗೆ ಆಗಮಿಸಿರುವ ಯೋಗಿ ಆದಿತ್ಯನಾಥ್, ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ್ದು, ಬಳಿಕ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವನ್ನು ಭೇಟಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.