
ವಿಶಾಖಪಟ್ಟಣ(ಅ.25) ವೈಎಸ್ ಆರ್ ಕಾಂಗ್ರೆಸ್ ಅಧ್ಯಕ್ಷ ವೈಎಸ್ ಜಗನ್ ಮೋಹನ್ ರೆಡ್ಡಿ ಮೇಲೆ ದುಷ್ಕರ್ಮಿಯೊಬ್ಬ ದಾಳಿ ಮಾಡಿದ್ದಾನೆ. ವಿಶಾಖಪಟ್ಟಣದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೇ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದಿದ್ದು ಜಗನ್ ಎಡ ಭಾಗದ ತೋಳಿಗೆ ಗಾಯವಾಗಿದೆ.
ಸೆಲ್ಫಿ ತೆಗೆದುಕೊಳ್ಳುವ ನೆಪದಲ್ಲಿ ಬಂದ ಯುವಕ ಜಗನ್ ಜೊತೆ ಮಾತನಾಡಿ, ಒಂದು ವೇಳೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 168 ಸೀಟು ಗೆದ್ದರೆ ಏನು ಮಾಡುತ್ತೀರಿ ಎಂದು ಕೇಳಿದ್ದಾನೆ, ನಂತರ ಸೆಲ್ಫಿ ತೆಗೆದುಕೊಂಡ ಬಳಿಕ ಚಾಕುವಿನಿಂದ ಜಗನ್ ಅವರ ಎಡ ಭಾಗದ ತೋಳಿಗೆ ಇರಿದಿದ್ದಾನೆ.
ಜಗನ್ ಜತೆಗೇ ಇದ್ದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ವಿಮಾನ ನಿಲ್ದಾಣದೊಳಗೆ ಬಿಗಿ ಭದ್ರತೆ ಇರುತ್ತದೆ. ಹೀಗಿರುವಾಗ ಚಾಕು ಹೇಗೆ ತೆಗೆದುಕೊಂಡು ಬಂದಿದ್ದ ಎಂಬ ಪ್ರಶ್ನೆ ಕಾಡುತ್ತಿದ್ದು ಭದ್ರತಾ ವ್ಯವಸ್ಥೆ ಮೇಲೆ ಅನುಮಾನ ವ್ಯಕ್ತಪಡಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.