
ಬೆಂಗಳೂರು : ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಜಮೀರ್ ಅಹ್ಮದ್‌ಖಾನ್ ಎರಡನೇ ಬಾರಿಗೆ ಕುಮಾರಸ್ವಾಮಿ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ. ಸತತ ನಾಲ್ಕು ಬಾರಿ ಶಾಸಕರಾಗಿರುವ ಜಮೀರ್ ಮುಸ್ಲಿಂ ಸಮುದಾಯದ ಪ್ರಭಾವಿ ನಾಯಕರಾಗಿ ಬೆಳೆಯುತ್ತಿದ್ದಾರೆ. ಮುಸ್ಲಿಂ ಸಮುದಾಯದಲ್ಲಿ ಅವರಿಗಿರುವ ವರ್ಚಸ್ಸು ಪರಿಗಣಿಸಿ ಇದೇ ಮೊದಲ ಬಾರಿಗೆ ಕಾಂಗ್ರೆಸ್ಸಿಗೆ ಆಗಮಿಸಿರುವ ಅವರಿಗೆ ಸಚಿವ ಸ್ಥಾನ ನೀಡಿದೆ. ಅಲ್ಲದೆ, ರೋಷನ್ ಬೇಗ್, ತನ್ವೀರ್ ಸೇಠ್‌ರಂತಹ ಹಿರಿಯರನ್ನು ಬದಿಗೆ ಸರಿಸಿ ಜಮೀರ್‌ಗೆ ಅವಕಾಶ ನೀಡಿದೆ.
ಜಮೀರ್ ಅಹ್ಮದ್‌ಖಾನ್ ಓದಿದಿರುವುದು ಎಸ್ಎ ವೇಳೆ ಖುದ್ದು ಶಾಸಕರನ್ನು ಹೊತ್ತ ಬಸ್ಸು ಚಾಲನೆ ಮಾಡುವ ಮೂಲಕ ಗಮನ ಸೆಳೆದಿದ್ದರು. ಎಸ್.ಎಂ. ಕೃಷ್ಣ ಮಹಾರಾಷ್ಟ್ರ ರಾಜ್ಯಪಾಲರಾಗಿ ನೇಮಕವಾದ ಹಿನ್ನೆಲೆಯಲ್ಲಿ ಚಾಮರಾಜಪೇಟೆಗೆ ನಡೆದ 2005 ರ ಉಪ ಚುನಾವಣೆಯಲ್ಲಿ ಜೆಡಿಎಸ್ ಪರ ನಿಲ್ಲುವ ಮೊದಲ ಅವಕಾಶ ಅವರಿಗೆ ದೊರೆಯಿತು. ಈ ವೇಳೆ ಆರ್ .ವಿ. ದೇವರಾಜ್ ಅವರನ್ನು ಮಣಿಸಿದ್ದ ಅವರು ಸತತ ನಾಲ್ಕು ಬಾರಿ ಗೆದ್ದಿದ್ದಾರೆ.
ಈ ಹಿಂದೆ 20-20 ಸರ್ಕಾರದಲ್ಲಿ ಎಚ್.ಡಿ. ಕುಮಾರಸ್ವಾಮಿ ಸಂಪುಟದಲ್ಲಿ ಹಜ್ ಮತ್ತು ವಕ್ಫ್ ಖಾತೆ ಸಚಿವನಾಗಿ ಕಾರ್ಯ ನಿರ್ವಹಿಸಿದ್ದರು. 2016 ರ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ನಡೆಸಿ ಜೆಡಿಎಸ್ ತೊರೆದಿದ್ದರು. 2018ರ ಮಾರ್ಚ್‌ನಲ್ಲಿ ಆರು ಮಂದಿ ಬಂಡಾಯ ಶಾಸಕರೊಂದಿಗೆ ರೋಷನ್‌ಬೇಗ್ ಕಾಂಗ್ರೆಸ್ ಸೇರ್ಪಡೆಗೊಂಡು ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಸತತ ನಾಲ್ಕನೇ ಬಾರಿಗೆ ಭಾರಿ ಅಂತರದಿಂದ ಜಯ ಗಳಿಸಿದ ಅವರು, ಮೈತ್ರಿ ಸರ್ಕಾರದಲ್ಲಿ ಮತ್ತೆ ಕುಮಾರಸ್ವಾಮಿ ಸಂಪುಟದಲ್ಲಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.